ಚಿಂತಾಮಣಿ : ಅತಿ ವೇಗ ಮತ್ತು ಅಜಾಗೃತೆಯಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ದಾರುಣವಾಗಿ ಸಾವನ್ನಪ್ಪಿರುವ ಅವಘಡ ನಗರದ ಕೋಲಾರ ವೃತ್ತದಲ್ಲಿ ಶುಕ್ರವಾರ ಸಂಭವಿಸಿದೆ.
ಮದನಪಲ್ಲಿ ಕಡೆಯಿಂದ ಶುಕ್ರವಾರ ಬೆಳ್ಳಗ್ಗೆ 9.30ರ ವೇಳೆಗೆ ಅವಘಡ ಸಂಭವಿಸಿದ್ದು, ಚಿಂತಾಮಣಿ ಕಡೆಗೆ ತೆರಳುತ್ತಿದ್ದ ಆಯಿಲ್ ಟ್ಯಾಂಕರ್ ಚಿಂತಾಮಣಿ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ಬೈಕ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾನೆ.
ವಿಷಯ ತಿಳಿದ ಕೂಡಲೆ ಸ್ಥಳಕ್ಕೆ ನಗರ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಮೃತ ದ್ವಿಚಕ್ರ ವಾಹನ ಸವಾರನ ಗುರುತು ಇದುವರೆಗೆ ತಿಳಿದು ಬಂದಿಲ್ಲ.
ರಸ್ತೆಯಲ್ಲಿ ಇರುವ ಉಬ್ಬುಗಳನ್ನು ಏಕಾಏಕಿಯಾಗಿ ತೆರವುಗೊಳಿಸಿದ ಪರಿಣಾಮವೇ ಈ ಅಪಘಾತ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.