Breaking News

ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ಹುಡುಗ ನಾಪತ್ತೆ

Spread the love

ಬೆಳಗಾವಿ: ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಹುಡುಗನೊಬ್ಬ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದ ಬಳಿ ನಡೆದಿದೆ.

ಕಮಲದಿನ್ನಿ ಗ್ರಾಮದ ಉದಯ ಪರಶುರಾಮ ಹಾದಿಮನಿ(17) ನದಿಯಲ್ಲಿ ನಾಪತ್ತೆಯಾವನು. ಈತ ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋದಾಗ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಪರಶುರಾಮನಿಗಾಗಿ ಶೋಧ ಕಾರ್ಯವನ್ನು ಆರಂಭಿಸಿದ್ದರು. ಗುರುವಾರ ರಾತ್ರಿ ಕತ್ತಲು ಇರುವುದರಿಂದ ಶೋಧಕಾರ್ಯ ಸ್ಥಗಿತಗೊಳಿಸಿದ್ದರು. ಬಳಿಕ ಶುಕ್ರವಾರ ಬೆಳಗ್ಗೆ 8.30ರಿಂದ ಮತ್ತೆ ಕಾರ್ಯಾಚರಣೆಯಲ್ಲಿ ತೊಡಗಿದ ಅಗ್ನಿಶಾಮಕ ಸಿಬ್ಬಂದಿ ಎಸ್‍ಡಿಆರೆಫ್ ತಂಡಕ್ಕೆ ಮಾಹಿತಿ ರವಾನಿಸಿ ಅಗ್ನಿಶಾಮಕ ಅಧಿಕಾರಿಗಳು ಮತ್ತು ಎನ್‍ಡಿಆರೆಫ್ ತಂಡ ಬೋಟ್ ಮೂಲಕ ಯುವಕನ ಮತ್ತೆಗೆ ಶೋಧಕಾರ್ಯ ಮುಂದುವರಿಸಿದ್ದಾರೆ.

ಈ ಸಂಬಂಧ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ