Breaking News

ಡಿಗ್ರಿ ಕಾಲೇಜಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕಿ ಅಂಜಲಿ ನಿಂಬಾಳ್ಕರ್

Spread the love

ಬೆಳಗಾವಿ: ಕಳೆದ ಮೂರು ವರ್ಷಗಳ ಹಿಂದೆ ಖಾನಾಪೂರ ತಾಲೂಕಿಗೆ ಮಂಜೂರಾಗಿದ್ದ ಡಿಗ್ರಿ ಕಾಲೇಜು, ಗದಗಿಗೆ ಸ್ಥಳಾಂತರಗೊಂಡಿತ್ತು. ಅದನ್ನು ಮತ್ತೆ ಖಾನಾಪೂರ ತಾಲೂಕಿಗೆ ತಂದು ವಿದ್ಯಾರ್ಥಿಗಳಿಗೆ ಸಮರ್ಪಣೆ ಮಾಡುವುದರಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಯಶಸ್ವಿ ಆಗಿದ್ದಾರೆ.

ಈ ಹಿಂದೆ ಖಾನಾಪುರ ತಾಲೂಕಿಗೆ ಮಂಜೂರಾಗಿದ್ದ ಸರ್ಕಾರಿ ಡಿಗ್ರಿ ಕಾಲೇಜು ಗದಗ್‍ಗೆ ಸ್ಥಳಾಂತರಗೊಂಡಿತ್ತು. ಅದನ್ನು ಮಾಜಿ ಸಚಿವ ಎಚ್.ಕೆ ಪಾಟೀಲ್ ಸಹಾಯದಿಂದ ಮತ್ತೆ ಖಾನಾಪುರ ತಾಲೂಕಿಗೆ ತರುವಲ್ಲಿ ಡಾ. ಅಂಜಲಿ ನಿಂಬಾಳ್ಕರ್ ಯಶಸ್ವಿಯಾಗಿದ್ದಾರೆ.

ಈ ಕುರಿತು ಸ್ವತಃ ಅಂಜಲಿ ನಿಂಬಾಳ್ಕರ್ ಮಾತನಾಡಿ, ತಾಲೂಕಿನ ಬೀಡಿ ಗ್ರಾಮದ ಹೊರವಲಯದಲ್ಲಿ ಡಿಗ್ರಿ ಕಾಲೇಜು ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಂದರ್ಭದಲ್ಲಿ, ಎರಡು ಕೋಟಿಯ ಅನುದಾನ ಕೂಡಾ ಮಂಜುರಾತಿ ಮಾಡಿಸಿಕೊಂಡು ಬಂದಿರುವುದಾಗಿ ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ