Breaking News

ರಸ್ತೆಯಿಂದ ಇಳಿದು ಗದ್ದೆಗೆ ನುಗ್ಗಿದ ಸರ್ಕಾರಿ ಬಸ್; ವಿದ್ಯಾರ್ಥಿಗಳೇ ತುಂಬಿದ್ದರು!

Spread the love

ಬಳ್ಳಾರಿ: ಶಾಲಾ ಕಾಲೇಜಿನ ಮಕ್ಕಳೇ ಹೆಚ್ಚಾಗಿದ್ದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ನುಗ್ಗಿದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಓರ್ವಾಯಿ ಗ್ರಾಮದ ಬಳಿ ನಡೆದಿದೆ. ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ‌.

ಓರ್ವಾಯಿ ಗ್ರಾಮದಿಂದ ಬಳ್ಳಾರಿಗೆ ತೆರಳುತ್ತಿದ್ದ ಬಸ್​ನಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳೇ ಹೆಚ್ಚಾಗಿ ಪ್ರಯಾಣಿಸುತ್ತಿದ್ದರು. ರಸ್ತೆ ಕಿರಿದಾಗಿರುವುದರಿಂದ ಚಾಲಕನಿಗೆ ನಿಯಂತ್ರಿಸುವಲ್ಲಿ ಸಮಸ್ಯೆಯಾಗಿ, ಬಸ್​ ರಸ್ತೆ ಪಕ್ಕದಲ್ಲಿದ್ದ ಗದ್ದೆಗೆ ನುಗ್ಗಿತು. ಗದ್ದೆಯು ತಗ್ಗಿನಲ್ಲಿದ್ದರೂ ಬಸ್​ ಕೊಂಚವೇ ವಾಲಿ ನಿಂತಿದ್ದರಿಂದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಬಸ್ಸಿನ ಕಂಡೀಷನ್​ ಸರಿಯಾಗಿಲ್ಲದ್ದೂ ಈ ರೀತಿಯಾಗಲು ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ