Breaking News

ಗೋವಾದಲ್ಲಿ ಚಾರ್ಟರ್ ವಿಮಾನಗಳು ಆರಂಭ: ಉತ್ತಮ ಪ್ರವಾಸಿ ಋತು ನಿರೀಕ್ಷೆ

Spread the love

ಪಣಜಿ: ಗೋವಾಕ್ಕೆ ಚಾರ್ಟರ್ ವಿಮಾನಗಳು ಆರಂಭಗೊಳ್ಳುವ ಮೂಲಕ ಗೋವಾ ಪ್ರಸಕ್ತ ವರ್ಷ ಉತ್ತಮ ಪ್ರವಾಸಿ ಋತುವನ್ನು ಹೊಂದಲಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು- ರಾಜ್ಯದಲ್ಲಿ ಎಲ್ಲಾ ಪ್ರವಾಸೋದ್ಯಮ ಸಂಬಂಧಿತ ವ್ಯವಹಾರಗಳ ಸುರಕ್ಷತೆಗಾಗಿ ಕೋವಿಡ್ ಸಂಬಂಧಿತ ಎಲ್ಲಾ ಪ್ರೊಟೊಕಾಲ್‍ಗಳನ್ನು ಅನುಸರಿಸಬೇಕು. ಬೀಚ್‍ಗಳಲ್ಲಿ ಬಾರ್ ಮತ್ತು ರೆಸ್ಟೊರೆಂಟ್ ಮಾಲೀಕರು ಸರಕಾರದ ಎಲ್ಲ ಮಾರ್ಗಸೂಚಿಗಳನ್ನು ಅನುಸರಿಸಬೇಕು ಮತ್ತು ಅವರು ತಮ್ಮ ವ್ಯಾಪಾರವನ್ನು ಪುನರಾರಂಭಿಸಬೇಕು ಎಂದು ಮುಖ್ಯಮಂತ್ರಿ ಸಾವಂತ್ ಸೂಚನೆ ನೀಡಿದ್ದಾರೆ.

ಕೋವಿಡ್ ಬಳಿಕ ಗೋವಾ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ ಬಿದ್ದಿತ್ತು, ಇದೀಗ ಸರಕಾರ ಕಠಿಣ ನಿಯಮಗಳನ್ನು ಒಂದೊಂದಾಗಿ ಸಡಿಲಿಸುತ್ತಾ ಬಂದಿರುವ ಹಿನ್ನಲೆಯಲ್ಲಿ ಪ್ರವಾಸೋಧ್ಯಮ ಮತ್ತೆ ಚಿಗುರಲು ಆರಂಭವಾಗಿದೆ .


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ