Breaking News

ಕನ್ನಡದ ಹಿರಿಯ ನಟ ಸತ್ಯಜಿತ್ ಇನ್ನಿಲ್ಲ!

Spread the love

ಬೆಂಗಳೂರು: ಹಲವು ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಸತ್ಯಜಿತ್ ಅವರು ತಡರಾತ್ರಿ ಎರಡು ಗಂಟೆ ಸಮಯದಲ್ಲಿ ನಿಧನರಾಗಿದ್ದಾರೆ. ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸತ್ಯಜಿತ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದ ಸತ್ಯಜಿತ್ ಆ ಮೂಲಕ ಚಿತ್ರರಂಗದಲ್ಲಿ ಹೆಸರು ಮಾಡಿದ್ದರು. ಚಂದನವನದ ಹಲವಾರು ಸ್ಟಾರ್​ ಕಲಾವಿದರ ಸಿನಿಮಾಗಳಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿತ್ತು.

ಸತ್ಯಜಿತ್ ಅವರ​ ಆರೋಗ್ಯ ಪರಿಸ್ಥಿತಿ ಗಂಭೀರವಾಗಿ ಕಳೆದ ಸೋಮವಾರ ಬೌರಿಂಗ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ. ಆಸ್ಪತ್ರೆಗೆ ಸತ್ಯಜಿತ್ ದಾಖಲಿಸಿದ ದಿನ ಮಾಧ್ಯಮದವರ ಜತೆ ಮಾತನಾಡಿದ್ದ​ ಪುತ್ರ ಆಕಾಶ್, ತಂದೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ದಿನದಿಂದ ದಿನಕ್ಕೆ ಆರೋಗ್ಯ ಹದಗೆಡುತ್ತಲೇ ಇದೆ. ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದರು.

 

ಗ್ಯಾಂಗ್ರಿನ್​ನಿಂದಾಗಿ ಅವರ ಒಂದು ಕಾಲು ಕತ್ತರಿಸಲಾಗಿತ್ತು. ಬಳಿಕ ಸಕ್ಕರೆ ಕಾಯಿಲೆ ಮತ್ತು ಇನ್ನಿತರೆ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಕಾಲಿನಲ್ಲಿ ಗ್ಯಾಂಗ್ರಿನ್​ ಕಾಣಿಸಿಕೊಂಡ ಬಳಿಕ ಸಿನಿಮಾ ರಂಗದಿಂದ ಅವರಿಗೆ ಬೇಡಿಕೆ ಕಡಿಮೆ ಆಯಿತು. ಬಳಿಕ ಕುಟುಂಬದ ಹಣಕಾಸಿನ ಸ್ಥಿತಿಯು ಉತ್ತಮವಾಗಿರಲಿಲ್ಲ. ಅದಲ್ಲದೆ ಮಗಳ ಮೇಲೆಯೂ ಸತ್ಯಜಿತ್​ ಅಸಮಾಧಾನವಾಗಿತ್ತು. ಕುಟುಂಬ ಮತ್ತು ಆರೋಗ್ಯ ಸಮಸ್ಯೆಗಳಿಂದ ಸತ್ಯಜಿತ್​ ತುಂಬಾ ಕೊರಗಿ ಹೋಗಿದ್ದರು.

2018ರಲ್ಲಿ ತೆರೆಕಂಡ ಪ್ರಿಯಾಂಕಾ ಉಪೇಂದ್ರ ಅಭಿನಯದ ಸೆಕೆಂಡ್​ ಹಾಫ್​ ಚಿತ್ರದ ಸತ್ಯಜಿತ್‌ ಅಭಿನಯಿಸಿದ್ದರು. ಇದೇ ಸತ್ಯಜಿತ್ ಅಭಿನಯಿಸಿದ ಕೊನೆಯ ಚಿತ್ರ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ