Breaking News

ಚಲಿಸುತ್ತಿದ್ದ ರೈಲಿನಲ್ಲಿ ಪತಿಯ ಎದುರೇ ಮಹಿಳೆಯ ಗ್ಯಾಂಗ್ ರೇಪ್

Spread the love

ಮುಂಬಯಿ : ಲಕ್ನೋ -ಮುಂಬೈ ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪತಿಯ ಎದುರೇ 20 ವರ್ಷದ ಮಹಿಳೆಯೊಬ್ಬಳ ಮೇಲೆ ಶುಕ್ರವಾರ ತಡ ರಾತ್ರಿ ಡಕಾಯಿತರು ಗ್ಯಾಂಗ್ ರೇಪ್ ಎಸಗಿದ ಕಳವಳಕಾರಿ ಘಟನೆ ವರದಿಯಾಗಿದೆ.

ಸುಮಾರು 8 ಮಂದಿ ಡಕಾಯಿತರ ತಂಡ ಪ್ರಯಾಣಿಕರಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿದೆ. ಬಳಿಕ ಮಹಿಳೆಯನ್ನು ಎಳೆದಾಡಿ ಗ್ಯಾಂಗ್ ರೇಪ್ ಎಸಗಿದೆ. ಸಹ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿರುವುದಾಗಿ ರೈಲ್ವೆ ಪೊಲೀಸರು ತಿಳಿಸಿದ್ದಾರೆ .

ಇಗತ್ ಪುರಿ ಮತ್ತು ಕಸಾರ ರೈಲು ನಿಲ್ದಾಣಗಳ ನಡುವೆ ಘಟನೆ ನಡೆದಿದ್ದು, ಈಗಾಗಲೇ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ನಾಲ್ಕು ಮಂದಿ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ