Breaking News

ಆಟವಾಡುತ್ತಾ ಕಾಲುವೆಗೆ ಬಿದ್ದ 4 ಮಕ್ಕಳು.. ಇಬ್ಬರು ಕಂದಮ್ಮಗಳ ದಾರುಣ ಸಾವು

Spread the love

ಚಿಕ್ಕೋಡಿ: ಆಟ ಆಡುತ್ತ ಹೋಗಿ ಕರಿಮಸೂತಿ ಏತ ನೀರಾವರಿಯ ಕಾಲುವೆಗೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆಟ ಆಡುತ್ತ ಸಂಜೆ ಕೆನಾಲ್ ಬಳಿ ಹೋಗಿದ್ದ ನಾಲ್ವರು ಮಕ್ಕಳ ಪೈಕಿ ಇಬ್ಬರು ಮಕ್ಕಳು ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಸಪ್ನಾ ವಿನಾಯಕ್ ಪುಂಡಿಪಲ್ಲೆ(11) ಮತ್ತು ಪ್ರಥಮ ವಿನಾಯಕ ಪುಂಡಿಪಲ್ಲೆ (7) ಮೃತ ಮಕ್ಕಳು.

ಮಕ್ಕಳು ಕಾಲುವೆಗೆ ಬಿದ್ದ ತಕ್ಷಣ ಸ್ಥಳೀಯರು ಇಬ್ಬರು‌ ಮಕ್ಕಳ ರಕ್ಷಣೆ ಮಾಡಿದ್ದಾರೆ. ಇನ್ನಿಬ್ಬರು ಮಕ್ಕಳ ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ