ಕಲಬುರಗಿ: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಬೆಳಗ್ಗೆ 6 ಗಂಟೆ ಸುಮಾರಿಗೆ ಭೂಕಂಪನವಾಗಿದೆ. ರಿಕ್ಟರ್ ಮಾಪಕದಲ್ಲಿ 3.4ರಷ್ಟು ತೀವ್ರತೆ ದಾಖಲಾಗಿದೆ.
ಸುಮಾರು 10 ಕಿಲೋಮೀಟರ್ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಕೆಲವು ದಿನಗಳ ಹಿಂದೆಯಷ್ಟೇ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಮತ್ತು ತೇಗಲತಿಪ್ಪಿ ಗ್ರಾಮದಲ್ಲಿ ಲಘು ಭೂಕಂಪನವಾಗಿತ್ತು. ಗಡಿಕೇಶ್ವರ ಗ್ರಾಮದಲ್ಲಿ ಅನೇಕ ತಿಂಗಳಿಂದ ಭೂಮಿಯಿಂದ ನಿಗೂಢ ಸದ್ದು ಬರ್ತಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.