ಬೆಂಗಳೂರು: ಮಾಜಿ ಸಚಿವ ಜಮೀರ್ ಅಹಮದ್ ಅವರು ದಿಲ್ಲಿಯಲ್ಲೇ ಬೀಡು ಬಿಟ್ಟಿದ್ದು, ಸೋಮವಾರ ಪ್ರಿಯಾಂಕಾ ಗಾಂಧಿಯವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.
ಪ್ರಿಯಾಂಕಾ ಗಾಂಧಿಯವರ ಕಚೇರಿಯಿಂದ ಜಮೀರ್‌ಗೆ ಕರೆ ಮಾಡಿ ಭೇಟಿಗೆ ಸಮಯ ನೀಡಲಾಗಿದೆ. ಉತ್ತರಪ್ರದೇಶದ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪ್ರಭಾವವಿರುವ ಕ್ಷೇತ್ರಗಳಲ್ಲಿ ಜಮೀರ್ ಆಹಮದ್‌ಗೆ ಪ್ರಚಾರದ ಹೊಣೆ ನೀಡುವ ನಿರೀಕ್ಷೆಯಿದೆ ಎಂದು ತಿಳಿದು ಬಂದಿದೆ.
ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಮತಬ್ಯಾಂಕ್‌ಗೆ ಒವೈಸಿ ಲಗ್ಗೆ ಇಡಲು ಕಾರ್ಯತಂತ್ರ ರೂಪಿಸಿದ್ದು, ಅದಕ್ಕೆ ಪ್ರತಿಯಾಗಿ ಜಮೀರ್ ಮೂಲಕ ಪ್ರತಿತಂತ್ರ ಹೆಣೆಯಲು ಕಾಂಗ್ರೆಸ್ ಮುಂದಾಗಿದೆ ಎಂದು ಹೇಳಲಾಗಿದೆ.
ಸಿದ್ದರಾಮಯ್ಯ ಅವರು ಇತ್ತೀಚೆಗೆ ಸೋನಿಯಾ ಗಾಂಧಿ ಭೇಟಿಗೆ ಹೋಗಿದ್ದಾಗ ಜಮೀರ್‌ರನ್ನೂ ಜತೆಗೆ ಕರೆದೊಯ್ದಿದ್ದರು.
Laxmi News 24×7