Breaking News

ಜಮೀರ್‌ ಅಹಮದ್‌ಗೆ ಉತ್ತರಪ್ರದೇಶ ಚುನಾವಣೆ ಪ್ರಚಾರದ ಉಸ್ತುವಾರಿ?

Spread the love

ಬೆಂಗಳೂರು: ಮಾಜಿ ಸಚಿವ ಜಮೀರ್‌ ಅಹಮದ್‌ ಅವರು ದಿಲ್ಲಿಯಲ್ಲೇ ಬೀಡು ಬಿಟ್ಟಿದ್ದು, ಸೋಮವಾರ ಪ್ರಿಯಾಂಕಾ ಗಾಂಧಿಯವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ಪ್ರಿಯಾಂಕಾ ಗಾಂಧಿಯವರ ಕಚೇರಿಯಿಂದ ಜಮೀರ್‌ಗೆ ಕರೆ ಮಾಡಿ ಭೇಟಿಗೆ ಸಮಯ ನೀಡಲಾಗಿದೆ. ಉತ್ತರಪ್ರದೇಶದ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪ್ರಭಾವವಿರುವ ಕ್ಷೇತ್ರಗಳಲ್ಲಿ ಜಮೀರ್‌ ಆಹಮದ್‌ಗೆ ಪ್ರಚಾರದ ಹೊಣೆ ನೀಡುವ ನಿರೀಕ್ಷೆಯಿದೆ ಎಂದು ತಿಳಿದು ಬಂದಿದೆ.

ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಮತಬ್ಯಾಂಕ್‌ಗೆ ಒವೈಸಿ ಲಗ್ಗೆ ಇಡಲು ಕಾರ್ಯತಂತ್ರ ರೂಪಿಸಿದ್ದು, ಅದಕ್ಕೆ ಪ್ರತಿಯಾಗಿ ಜಮೀರ್‌ ಮೂಲಕ ಪ್ರತಿತಂತ್ರ ಹೆಣೆಯಲು ಕಾಂಗ್ರೆಸ್‌ ಮುಂದಾಗಿದೆ ಎಂದು ಹೇಳಲಾಗಿದೆ.

ಸಿದ್ದರಾಮಯ್ಯ ಅವರು ಇತ್ತೀಚೆಗೆ ಸೋನಿಯಾ ಗಾಂಧಿ ಭೇಟಿಗೆ ಹೋಗಿದ್ದಾಗ ಜಮೀರ್‌ರನ್ನೂ ಜತೆಗೆ ಕರೆದೊಯ್ದಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ