Breaking News
Home / ಜಿಲ್ಲೆ / ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ:ರಮೇಶ್ ಜಾರಕಿಹೋಳಿ.

ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ:ರಮೇಶ್ ಜಾರಕಿಹೋಳಿ.

Spread the love

ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ‌ ಧಾರಾಕಾರ ಮಳೆಯಾಗುತ್ತಿದೆ.ಇದರಿಂದಾಗಿ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2ಲಕ್ಷ ಕ್ಯೂಸೆಕ್ ಗೂ ಹೆಚ್ಚಿನ ನೀರು ಹರಿದು ಬರುತ್ತಿದೆ. ಅಷ್ಟೇ ಅಲ್ಲದೇ ಜಿಲ್ಲೆಯ ಘಟಪ್ರಭಾದ ಹಿಡಕಲ್ ಜಲಾಶಯ ಮತ್ತು ಮಲಪ್ರಭಾದ ನವಿಲುತೀರ್ಥ ಜಲಾಶಯ ತುಂಬಿದ ಪರಿಣಾಮ ಹೆಚ್ಚಿನ ನೀರನ್ನು ಹೊರಬಿಡಲಾಗುತ್ತಿದೆ. ಸದ್ಯ ಜಲಾಶಯಗಳ ಒಳ ಹರಿವು ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡುವ ಸಾಧ್ಯತೆ ಇದೆ. ನದಿ ಪಾತ್ರದಲ್ಲಿ ಮತ್ತೆ ಪ್ರವಾಹದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ.‌ಹಾಗಾಗಿ ನದಿ ತೀರದಲ್ಲಿನ ರೈತರು ಹಾಗೂ ಗ್ರಾಮಸ್ಥರು, ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ತೆರಳಬೇಕು.

ಇನ್ನೂ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಇನ್ನೂ ನೀರಾವರಿ ಇಲಾಖೆ ಅಧಿಕಾರಿಗಳಿಗೆ ದಿನದ 24ಗಂಟೆ ಕೆಲಸ ಮಾಡಲು ಸೂಚಿಸಲಾಗಿದ್ದು, ಮಹಾರಾಷ್ಟ್ರದ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.

ಸಂಭಾವ್ಯ ಪ್ರವಾಹ ಎದುರಿಸಲು ಕಳೆದ ಎರಡು ತಿಂಗಳಿಂದ ಜಿಲ್ಲೆಯಲ್ಲಿ ತಯಾರಿ ಮಾಡಿಕೊಂಡಿದ್ದೇವೆ.ಜನ-ಜಾನುವಾರುಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.ಪ್ರವಾಹ ಎದುರಿಸಲು ಸನ್ನದ್ಧವಾಗಿರಲು ಸೂಚಿಸಲಾಗಿದೆ.ಜನರು ಜಿಲ್ಲಾಡಳಿತದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ.

ರಮೇಶ್ ಜಾರಕಿಹೋಳಿ.
ಜಲಸಂಪನ್ಮೂಲ ಸಚಿವರು.
ಕರ್ನಾಟಕ ಸರ್ಕಾರ


Spread the love

About Laxminews 24x7

Check Also

ಇಂದು, ನಾಳೆ ಬೆಂಗಳೂರಿನಲ್ಲಿ ಅಮಿತ್‌ ಶಾ, ಯೋಗಿ ರೋಡ್‌ ಶೋ

Spread the loveಬೆಂಗಳೂರು: ಮೊದಲನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಕ್ಕೆ ದಿನಗಣನೆ ಪ್ರಾರಂಭವಾಗಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ