Breaking News

ಜೂಜು ಅಡ್ಡೆ ಮೇಲೆ ಪೊಲೀಸ್​​ ದಾಳಿ -ತಪ್ಪಿಸಿಕೊಳ್ಳಲು ನೀರಿಗೆ ಹಾರಿದ್ದ ವ್ಯಕ್ತಿ ಸಾವು

Spread the love

ಮೈಸೂರು: ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ನೀರಿಗೆ ಜಿಗುದಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕು ಹದಿನಾರು ಗ್ರಾಮದಲ್ಲಿ ನಡೆದಿದೆ.

ನಂಜುಂಡ (37) ಮೃತ ವ್ಯಕ್ತಿಯಾಗಿದ್ದು, ನಿನ್ನೆ ಸಂಜೆ 6.00 ಗಂಟೆ ಸಮಯದಲ್ಲಿ 5 ರಿಂದ 6 ಜನ ಸೇರಿ ಜೂಜು ಆಡುತ್ತಿದ್ದಾಗ ಪೊಲೀಸರ ದಾಳಿ ನಡೆಸಿದ್ದರು. ಈ ವೇಳೆ ಆತಂಕಗೊಂಡ ಎಲ್ಲರೂ ತಲಾ ಒಂದು ದಿಕ್ಕಿಗೆ ಓಡಿ ಪರಾರಿಯಾಗಲು ಯತ್ನಿಸಿದ್ದರು.

ಈ ಹಂತದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ನಂಜುಂಡ ಹದಿನಾರು ಕೆರೆಗೆ ಜಿಗಿದು ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆದರೆ ಈಜು ಬಾರದೆ ಇದ್ದ ಪರಿಣಾಮ ವ್ಯಕ್ತಿ ನೀರು ಪಾಲಾಗಿದ್ದು, ನಂಜನಗೂಡು ಗ್ರಾಮಾಂತರ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಶೋಧನಾ ಕಾರ್ಯ ನಡೆಸಿ ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ.


Spread the love

About Laxminews 24x7

Check Also

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Spread the loveಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ