ಬೆಂಗಳೂರು : ರಾಜ್ಯ ಸರಕಾರ ವಿದ್ಯುತ್ ಉತ್ಪಾದನೆ ಘಟಕಗಳ ಖಾಸಗೀಕರಣಕ್ಕೆ ಹುನ್ನಾರ ಮಾಡಿದೆ, ಹೀಗಾಗಿ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಮೊದಲಿನಿಂದಲೂ ಅಗತ್ಯಕ್ಕಿಂತ ಹೆಚ್ಚು ವಿದ್ಯುತ್ ಉತ್ಪಾದನೆ ಆಗುತ್ತಿತ್ತು.ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯೋ, ಕೃತಕ ಅಭಾವವೋ ಮೊದಲು ಗೊತ್ತಾಗಬೇಕು ಎಂದು ಆಗ್ರಹಿಸಿದರು.
ಇನ್ನೊಂದೆಡೆ, ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗದು ಮತ್ತು ವಿದ್ಯುತ್ ಅಭಾವ ಸೃಷ್ಟಿಯಾಗದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಮುತುವರ್ಜಿಯಿಂದ ರಾಜ್ಯಕ್ಕೆ ಹಂಚಿಕೆಯಾಗಬೇಕಿದ್ದ ಕಲ್ಲಿದ್ದಲು ಸಿಕ್ಕಿದೆ ಎಂದು ತಿಳಿಸಿದ್ದಾರೆ.