Breaking News

ಮದುವೆಯಾದರೂ ಸಿಂಗಲ್ ಆಗಿರುವ ಮೋದಿಗೆ ಹೇಳುವ ಧೈರ್ಯವಿದೆಯೇ? ಸುಧಾಕರ್ ಗೆ ಕಾಂಗ್ರೆಸ್ ಪ್ರಶ್ನೆ

Spread the love

ಬೆಂಗಳೂರು: ಆಧುನಿಕ ಮಹಿಳೆಯರು ವಿವಾಹವಾಗಲು, ಮಕ್ಕಳನ್ನು ಹೆರಲು ನಿರಾಕರಿಸುತ್ತಿದ್ದಾರೆ ಎಂದುರುವ ಸಚಿವ ಕೆ.ಸುಧಾಕರ್ ಅವರೇ, ಮದುವೆಯಾದರೂ ‘ಸಿಂಗಲ್’ ಆಗಿರುವ ಮೋದಿಯವರ ಬಗ್ಗೆಯೂ ಹೀಗೆ ಹೇಳುವ ಧೈರ್ಯವಿದೆಯೇ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಸುಧಾಕರ್ ಹೇಳಿಕೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಮಹಿಳೆಯರ ಬದುಕನ್ನ ನಿರ್ಧರಿಸುವ, ಅವರ ಆಯ್ಕೆಯನ್ನು ನಿಯಂತ್ರಿಸುವ, ಅವರ ಸ್ವತಂತ್ರ ಪ್ರಶ್ನಿಸುವ ಬಿಜೆಪಿಗೂ ತಾಲಿಬಾನ್‌ಗೂ ವ್ಯತ್ಯಾಸವಿಲ್ಲ ಎಂದಿದೆ.

 

ಮಹಿಳೆಯರ ಬಗ್ಗೆ ಸಚಿವ ಸುಧಾಕರ್ ಆಡಿದ ಮಾತು ಮಹಿಳಾ ಸ್ವಾತಂತ್ರವನ್ನು ಅಣಕಿಸುವಂತಿದೆ, ಸಚಿವ ಸುಧಾಕರ್ ಅವರೇ, ಮಹಿಳೆಯರ ಬದುಕಿನ ಆಯ್ಕೆಯನ್ನು ನಿರ್ಧರಿಸಲು ನೀವು ಯಾರು? ಪುರುಷ ಯಜಮಾನಿಕೆಯನ್ನು ಮುಂದುವರೆಸುವ ಹವಣಿಕೆ ನಿಮಗೇಕೆ? ಮನುವಾದವನ್ನು ನಂಬಿದ ಬಿಜೆಪಿಯ ಮಹಿಳಾ ವಿರೋಧಿ ಕುತಂತ್ರಗಳು ಅವರ ಮಾತುಗಳಲ್ಲಿಯೇ ವ್ಯಕ್ತವಾಗುತ್ತಿದೆ ಎಂದು ಕಾಂಗ್ರೆಸ್ ಟೀಕೆ ಮಾಡಿದೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ