ಬಳ್ಳಾರಿ: ಗಣಿ ಜಿಲ್ಲೆಯ ಜೀವನಾಡಿಯಾಗಿರುವ ತುಂಗ ಭದ್ರಾ ಜಲಾಶಯದ ಮೂರು ಕ್ರಸ್ಟ್ ಗೇಟ್ ನಿಂದ ಅಂದಾಜು 4,539 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಯಿತು.ಸದ್ಯ ತುಂಗಭದ್ರಾ ಜಲಾಶಯದಲ್ಲಿ 1,632.20 ಅಡಿಯಷ್ಟು ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೇವಲ ಅರ್ಧ ಅಡಿ ಅಷ್ಟೇ ಬಾಕಿಯಿದೆ. 33,737 ಕ್ಯೂಸೆಕ್ ನಷ್ಟು ನೀರು ಈ ಜಲಾಶಯಕ್ಕೆ ಹರಿದು ಬರುತ್ತಿದೆ.
ಹೀಗಾಗಿ ಸಂಜೆ ಜಲಾಶಯದಿಂದ ಮೂರು ಕ್ರಸ್ಟ್ ಗೇಟ್ ಮೂಲಕ ಸುಮಾರು 1,513 ಕ್ಯೂಸೆಕ್ ನೀರನ್ನು ಹರಿ ಬಿಡಲಾಗಿದೆ.
ಒಟ್ಟು 6,533 ಕ್ಯೂಸೆಕ್ ನೀರನ್ನು ಹರಿಬಿಡಲು ನಿರ್ಧರಿಸಲಾಗಿದೆ. ಇದರ ಭಾಗವಾಗಿ ಇದೀಗ 4,539 ಕ್ಯೂಸೆಕ್ ನೀರನ್ನು ಬಿಡಲಾಗಿದೆ. ನದಿ ಪಾತ್ರದ ಜನರು ಎಚ್ಚರದಿಂದಿರಬೇಕು. ಅಪಾಯದ ಸ್ಥಳದಲ್ಲಿರುವ ಜನ ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಜಲಾಶಯದ ಮಂಡಳಿ ಕೋರಿದೆ.