Breaking News
Home / ರಾಜಕೀಯ / ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆದಿಲ್ಲ. ಪದೇ ಪದೇ ಸಭೆ ಮುಂದಕ್ಕೆ ಹೋಗುತ್ತಿರುವುದಕ್ಕೆ ಬಿಜೆಪಿಯ ಇಬ್ಬರು ಶಾಸಕರೇ ಕಾರಣ

ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆದಿಲ್ಲ. ಪದೇ ಪದೇ ಸಭೆ ಮುಂದಕ್ಕೆ ಹೋಗುತ್ತಿರುವುದಕ್ಕೆ ಬಿಜೆಪಿಯ ಇಬ್ಬರು ಶಾಸಕರೇ ಕಾರಣ

Spread the love

ಬೆಳಗಾವಿ: ಬಿಜೆಪಿಯ ಇಬ್ಬರು ಶಾಸಕರ ಅಸಹಕಾರದಿಂದ ನಗರದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಈ ಬಗ್ಗೆ ಶಾಸಕರೇ ಸ್ಪಷ್ಟೀಕರಣ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆದಿಲ್ಲ. ಪದೇ ಪದೇ ಸಭೆ ಮುಂದಕ್ಕೆ ಹೋಗುತ್ತಿರುವುದಕ್ಕೆ ಬಿಜೆಪಿಯ ಇಬ್ಬರು ಶಾಸಕರೇ ಕಾರಣ ಎಂದು ಆರೋಪಿಸಿದರು.

ಸ್ಥಳೀಯ ಇಬ್ಬರು ಶಾಸಕರು ಬುಡಾ ಅಧ್ಯಕ್ಷರಿಗೆ ಸಹಕಾರ ನೀಡುತ್ತಿಲ್ಲ. ನಗರಾಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರನ್ನೂ ಸಹ ಬಿಜೆಪಿ‌ ಶಾಸಕರು ಸಭೆಗೆ ಹೋಗಲು ಬಿಡುತ್ತಿಲ್ಲ. ಈ ಬಗ್ಗೆ ಬುಡಾ ಅಧ್ಯಕ್ಷರೇ ಹೇಳಿಕೆ ನೀಡಿದ್ದಾರೆ. ಇದಕ್ಕೆ ಶಾಸಕರೇ ಸ್ಪಷ್ಟನೆ ನೀಡಬೇಕು ಎಂದರು.

ಬುಡಾದಲ್ಲಿ ನಾವು ಮಂಜೂರು ಮಾಡಿದ ಕೆಲಸಗಳು ಇನ್ನೂ ಬಾಕಿ ಇವೆ. ಒಂದು ವರ್ಷದಿಂದ ಅಭಿವೃದ್ಧಿ ಕುಂಠಿತವಾಗಿದೆ. ಅನುದಾನ, ಸಹಾಯಧನ, ಪ್ರೋತ್ಸಾಹ ಧನ ಕಡಿತವಾಗಿವೆ. ಇದಕ್ಕೆ ಬಿಜೆಪಿ ಶಾಸಕರೇ ಪರಿಹಾರವನ್ನು ಕಂಡುಕೊಳ್ಳಬೇಕು‌ ಎಂದರು.

ಮೇಯರ್ ಅಯ್ಕೆ ಆಗಿಲ್ಲ

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಬಂದು ತಿಂಗಳು ಕಳೆದರು ಇದುವರೆಗೂ ಮೇಯರ್ ಆಯ್ಕೆಯಾಗಿಲ್ಲ. ಮೇಯರ್, ಉಪಮೇಯರ್ ಆಗಲು ಒಂದು ವರ್ಷ ಬೇಕೆ ಬೇಕು ಎಂದು ನನಗನಿಸುತ್ತದೆ. ಬೆಳಗಾವಿಯಲ್ಲಿ ವ್ಯವಸ್ಥೆ ಹಾಗೆಯೇ ಇದೆ. ಕಳೆದ ಮೂರು ವರ್ಷಗಳಿಂದ ಸ್ಥಳೀಯ ಶಾಸಕರೇ ಇಲ್ಲಿ ದರ್ಬಾರ್ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಮುಂಬರುವ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಬೆಳಗಾವಿ ಉತ್ತರ ಹಾಗೂ ದಕ್ಷಿಣ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಕಾರ್ಯಕರ್ತರನ್ನು ಭೇಟಿ ಮಾಡುತ್ತಿದ್ದೇವೆ ಎಂದು ಸಹ ಸತೀಶ ಹೇಳಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ