Breaking News
Home / ರಾಜಕೀಯ / ಕರಾಳ ದಿನಾಚರಣೆಗೆ ಅನುಮತಿ ಬೇಡ, ಅದ್ಧೂರಿ ರಾಜ್ಯೋತ್ಸವಕ್ಕೆ ಕನ್ನಡಪರ ಸಂಘಟನೆಗಳ ಅಗ್ರಹ:

ಕರಾಳ ದಿನಾಚರಣೆಗೆ ಅನುಮತಿ ಬೇಡ, ಅದ್ಧೂರಿ ರಾಜ್ಯೋತ್ಸವಕ್ಕೆ ಕನ್ನಡಪರ ಸಂಘಟನೆಗಳ ಅಗ್ರಹ:

Spread the love

ರಾಜ್ಯೋತ್ಸವ ಸಂದರ್ಭದಲ್ಲಿ ಎಂ.ಇ.ಎಸ್. ಕರಾಳ ದಿನಾಚರಣೆಗೆ ಜಿಲ್ಲಾಡಳಿತ ಅವಕಾಶ ನೀಡಬಾರದು ಎಂದು ಕನ್ನಡಪರ ಸಂಘಟನೆಗಳ ಮುಖಂಡರೊಬ್ಬರು ಮನವಿ ಮಾಡಿಕೊಂಡರು.

ಅನಂತ ಬ್ಯಾಕೂಡ್ ಮಾತನಾಡಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಬೇಕು.
ಬೆಳಗಾವಿ ಕನ್ನಡ ರಾಜ್ಯೋತ್ಸವಕ್ಕೆ ಸರಕಾರ ವಿಶೇಷ ಅನುದಾನ ಒದಗಿಸಬೇಕು ಎಂದು ಒತ್ತಾಯಿಸಿದರು.

ರಾಣಿ ಚೆನ್ನಮ್ಮ ಪುತ್ಥಳಿಗೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಬೇಕು. ಪಾಲಿಕೆಯ ಪ್ರತಿ ವಾರ್ಡಿನಲ್ಲಿ ನವೆಂಬರ್ ಅಂತ್ಯದವರೆಗೆ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಸಲಹೆ ನೀಡಿದರು.

ಕನ್ನಡಪರ ಸಂಘಟನೆಗಳ ಮುಖಂಡ ಮಹಾದೇವ ತಳವಾರ ಮಾತನಾಡಿ, ಪಾಲಿಕೆಯ ನೂತನ ಸದಸ್ಯರು ಆಯಾ ವಾರ್ಡುಗಳಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆಗೆ ಚಾಲನೆ ನೀಡಬೇಕು ಎಂದು ಸಲಹೆ ನೀಡಿದರು.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ರಾಜ್ಯೋತ್ಸವ ಆಚರಿಸಬೇಕು ಎಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ವತಿಯಿಂದ ಕಟ್ಟುನಿಟ್ಟಾಗಿ ಆದೇಶಿಸಬೇಕು ಎಂದು ಮನವಿ ಮಾಡಿಕೊಂಡರು.
ಸ್ತಬ್ಧಚಿತ್ರಗಳ ಮೆರವಣಿಗೆಗೆ ವಾಹನಗಳನ್ನು ಒದಗಿಸಬೇಕು ಎಂದು ಜಿಲ್ಲಾಡಳಿತಕ್ಕೆ ಒತ್ತಾಯಿಸಿದರು.

ರೂಪಕ ವಾಹನಗಳು ಹಾಗೂ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಅರವಿಂದ ದೇಶಪಾಂಡೆ ಒತ್ತಾಯಿಸಿದರು.

ಕಳೆದ ಒಂದೆರಡು ವರ್ಷಗಳ ಅವಧಿಯಲ್ಲಿ ಕನ್ನಡಪರ, ರೈತಪರ ಹಾಗೂ ದಲಿತಪರ ಹೋರಾಟಗಾರರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮೌನ ಆಚರಿಸಲಾಯಿತು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್, ಬೆಳಗಾವಿ ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಮತ್ತಿತರರು ಉಪಸ್ಥಿತರಿದ್ದರು.
ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಕನ್ನಡಾಭಿಮಾನಿಗಳು, ಲಂಡನ್ ಕನ್ನಡಪರ ಸಂಘಟಕರಾದ ರಾಜು ಮೇತ್ರಿ ಸೇರಿದಂತೆ ನೂರಾರು ಜನರು ಸಭೆಯಲ್ಲಿ ಭಾಗವಹಿಸಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ