Home / Uncategorized / ಇಂಜಿನಿಯರಿಂಗ್ ಪದವಿಯಲ್ಲಿ ಕನ್ನಡ ಅಳವಡಿಕೆ 4 ಕಾಲೇಜುಗಳಿಗೆ ಅನುಮತಿ : ಸಿಎಂ

ಇಂಜಿನಿಯರಿಂಗ್ ಪದವಿಯಲ್ಲಿ ಕನ್ನಡ ಅಳವಡಿಕೆ 4 ಕಾಲೇಜುಗಳಿಗೆ ಅನುಮತಿ : ಸಿಎಂ

Spread the love

ಬೆಂಗಳೂರು: ಇಂಜಿಯರಿಂಗ್​ ಕಾಲೇಜುಗಳಲ್ಲಿ 4 ವರ್ಷದ ಬಿಎಸ್ಸಿ ಆನರ್ಸ್ ಆರಂಭಿಸಲು ಅನುಮತಿ ಪತ್ರ ನೀಡಲಾಗಿದೆ. ನೂತನ ಶಿಕ್ಷಣ ಪದ್ಧತಿ (NEP) ಅನುಸಾರ ಇಂಜಿನಿಯರಿಂಗ್ ಶಿಕ್ಷಣ ಅನುಷ್ಠಾನ ಮಾಡಲಾಗುವುದು ಎಂದು ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ಒಪ್ಪಿಗೆ ನೀಡಲಾಗಿದೆ. ಈ ಸಂಬಂಧ ನಾಲ್ಕು ಕಾಲೇಜುಗಳಿಗೆ ಅನುಮತಿ ಪತ್ರವನ್ನು ನೀಡಲಾಗಿದೆ. ಕನ್ನಡ ಭಾಷೆಯಲ್ಲಿ ಇಂಜಿನಿಯರಿಂಗ್ ಸಿಲಬಸ್ ಬಿಡುಗಡೆ ಮಾಡಿರುವುದು ಹೊಸ ಅಧ್ಯಾಯವಾಗಿದೆ. ಇದೊಂದು ಐತಿಹಾಸಿಕ ದಿನ ಎಂದು ಸಿಎಂ ಬೊಮ್ಮಾಯಿ ಸಂತಸ ಹಂಚಿಕೊಂಡಿದ್ದಾರೆ.

ಅತ್ಯಂತ ಪ್ರಗತಿಪರವಾಗಿ ಎನ್​ಇಪಿ ಜಾರಿಗೊಳಿಸುವಲ್ಲಿ ಯಶಸ್ವಿ ಆಗಿದ್ದೇವೆ. ಸಚಿವ ಡಾ. ಅಶ್ವತ್ಥ್​​ ನಾರಾಯಣ ಯಶಸ್ವಿಯಾಗಿದ್ದಾರೆ. ಎನ್​ಇಪಿ ಅನುಸಾರ ಇಂಜಿನಿಯರಿಂಗ್ ಶಿಕ್ಷಣ ಅನುಷ್ಠಾನ ಮಾಡುತ್ತೇವೆ ಎಂದು ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯಿಂದ ದೊಡ್ಡ ಬದಲಾವಣೆ ಆಗಲಿದೆ. ಕರ್ನಾಟಕದ ತಾಂತ್ರಿಕ ಶಿಕ್ಷಣದಲ್ಲಿ ದೊಡ್ಡ ಬದಲಾವಣೆ ಆಗುತ್ತದೆ. ಇಷ್ಟು ದೊಡ್ಡ ಪ್ರಮಾಣದ ಬದಲಾವಣೆ ಯಾವತ್ತೂ ಆಗಿಲ್ಲ ಎಂದು ಅವರು ಹೇಳಿದ್ದಾರೆ.

ಉನ್ನತ ಶಿಕ್ಷಣದಲ್ಲಿ ದೊಡ್ಡ ಪ್ರಮಾಣದಲ್ಲಿ ತಯಾರಿ ಮಾಡಿ ರಾಷ್ಟ್ರೀಯ ಶಿಕ್ಷಣ ನೀತಿಗೊಳಪಡಿಸಲಾಗುತ್ತಿದೆ. ನಾನು ಕೂಡ ಇಂಜಿನಿಯರಿಂಗ್ ಸ್ಟೂಡೆಂಟ್ ಆಗಿದ್ದೆ. ನನ್ನ ವಿಷಯದ ಬಗ್ಗೆ ಹೊಸತನ ಕೊಡುವ ಪ್ರಯತ್ನ ಮಾಡಲಾಗಿದೆ. ಹೊಸತನ ಕೊಡುವ ಪ್ರಯತ್ನವನ್ನು ನಾನು ಉದ್ಘಾಟಿಸಿದ್ದೇನೆ. ನಾನೇ ಉದ್ಘಾಟನೆ ಮಾಡಿದ್ದು ತುಂಬಾ ಖುಷಿ ತಂದಿದೆ. ಬದಲಾವಣೆಗೆ ವಿದ್ಯಾರ್ಥಿಗಳು ತಯಾರಿ ಮಾಡಿಕೊಳ್ಳಬೇಕು ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೊದಲು ಗುರುಗಳ ಮನಸ್ಥಿತಿ ಬದಲಾವಣೆಯಾಗಬೇಕು. ಬಳಿಕ ವಿದ್ಯಾರ್ಥಿಗಳ ಮನಸ್ಥಿತಿ ಬದಲಾವಣೆಯಾಗಲಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ನಂಬಿಕೆ ಇರಬೇಕು. ಹೊಸ ಶಿಕ್ಷಣ ನೀತಿ ಬರಬೇಕು. ಈಗ ಪರ್ಸೆಂಟೇಜ್ ಇದೆ ಇದು ಪರ್ಸೆಂಟೈಲ್ ಆಗಲಿ. ವಿರೋಧ ಪಕ್ಷಗಳು ಎನ್​​ಇಪಿಯನ್ನು ವಿರೋಧಿಸುತ್ತಿವೆ. ಆದ್ರೆ ನಮ್ಮ ಸರ್ಕಾರ ಗಟ್ಟಿ ನಿಲುವಿನಿಂದ ಜಾರಿಗೆ ತರ್ತಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಎನ್​ಇಪಿ ಅನುಸಾರ ಇಂಜಿನಿಯರಿಂಗ್ ಶಿಕ್ಷಣ ಅನುಷ್ಠಾನ ಕಾರ್ಯಕ್ರಮದಲ್ಲಿ ಡಾ. ಅಶ್ವತ್ಥ್​ ನಾರಾಯಣ ಮಾತನಾಡಿದ್ದಾರೆ. 66 ಸಂಸ್ಥೆಗಳಿಗೆ ಬಿಎಸ್ಸಿ ಆನರ್ಸ್ ಆರಂಭಿಸಲು ಒಪ್ಪಿಗೆ ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಹೆಚ್ಚಳಕ್ಕೆ ಪ್ರಯತ್ನ ಮಾಡಲಾಗುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಪ್ರಯತ್ನಿಸಲಾಗುತ್ತದೆ. ಎನ್​ಇಪಿಯನ್ನು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಅಳವಡಿಸಿ, ಉತ್ತಮವಾಗಿ ಸಂಸ್ಥೆಗಳನ್ನ ಬೆಳೆಸುವ ಪ್ರಯತ್ನ ನಡೆಸಲಾಗುತ್ತಿದೆ. ಈ ಕಾರ್ಯಕ್ಕೆ ಸರ್ಕಾರ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ: ಶತಮಾನೋತ್ಸವ ಕಾರ್ಯಕ್ರಮ ಸಂಪನ್ನ

Spread the love ಬೆಳಗಾವಿ: ಇಲ್ಲಿನ ಖಾಸಬಾಗದ ಉಪ್ಪಾರ ಗಲ್ಲಿಯಲ್ಲಿ ನಾಲ್ಕು ದಿನ ವೈಭವದಿಂದ ನಡೆದ ಬನಶಂಕರಿ ದೇವಸ್ಥಾನದ ಶತಮಾನೋತ್ಸವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ