Breaking News

ಉಪಚುನಾವಣೆ ಹಿನ್ನೆಲೆ : ಕಾಂಗ್ರೆಸ್ ಕಾರ್ಯಕರ್ತನಿಂದ ಬಿಜೆಪಿ ಯುವ ಕಾರ್ಯಕರ್ತರನ ಮೇಲೆ ಹಲ್ಲೆ

Spread the love

ಸಿಂದಗಿ: ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತ ತನ್ನ ಸಹಚರನೊಂದಿಗೆ ಬಿಜೆಪಿ ಯುವ ಕಾರ್ಯಕರ್ತರನ ಮೇಲೆ ಹಲ್ಲೆ ಮಾಡಿದ ಘಟನೆ ತಾಲೂಕಿನ ರಾಂಪುರ ಪಿ.ಎ. ಗ್ರಾಮದ ಪೆಟ್ರೋಲ್ ಪಂಪ್ ಬಳಿ ಮಂಗಳವಾರ ನಡೆದಿದೆ.

ತಾಲೂಕಿನ ನಾಗರಹಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಪ್ರಮೋದ ಬಾಗೇವಾಡಿ ಅವರ ಮೇಲೆ ಬಬಲೇಶ್ವರ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಬಾರದು ಎಂದು ಅವರು ಹಲ್ಲೆ ಮಾಡಿದ್ದಾರೆ ಎಂದು ಗಾಯಗೊಂಡ ಬಿಜೆಪಿ ಕಾರ್ಯಕರ್ತ ದೂರಿದ್ದಾನೆ.‌

ಗಾಯಾಳನ್ನು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಿಜೆಪಿ ಪಕ್ಷದ ಅಭ್ಯರ್ಥಿ ರಮೇಶ ಭೂಸನೂರ ಅವರು ಆಸ್ಪತ್ರೆಗೆ ಬೇಟಿ ನೀಡಿ ಗಾಯಾಳುವಿನ ಯೋಗಕ್ಷೇಮ ವಿಚಾರಿಸಿದ್ದಾರೆ. ಗಾಯಾಳು ಸಿಂದಗಿ ಪೋಲಿಸರಿಗೆ ದೂರು ನೀಡಿದ್ದಾನೆ.ಪ್ರಕರಣ ದಾಖಲಾಗಿರುವ ಕುರಿತಾಗಿ ಮಾಹಿತಿ ಲಭ್ಯವಾಗಿಲ್ಲ.

 

Spread the love

About Laxminews 24x7

Check Also

ಇನ್ನೂ ಎರಡು ದಿನ ಮಹಾಮಳೆ

Spread the loveಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ (ಜು.7) ಜೋರು ಗಾಳಿ ಸಹಿತ ಮಳೆಯಾಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ