ಬೆಂಗಳೂರು: ಬೆಂಗಳೂರು: ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಮಾಜಿ ಸಂಸದ ಉಗ್ರಪ್ಪ ಆಡಿರುವ ಮಾತುಗಳು ರಾಜ್ಯ ಕಾಂಗ್ರೆಸ್ನಲ್ಲಿ ಹೊಸ ಬಿರುಗಾಳಿ ಸೃಷ್ಟಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ‘ಕಲೆಕ್ಷನ್ ಗಿರಾಕಿ’ ಎಂದು ಸಲೀಂ ಹೇಳಿದ್ದಾರೆ. ಇದರ ಜೊತೆಗೆ ಡಿಕೆ ಶಿವಕುಮಾರ್, ಕುಡಿಯುವ ವಿಚಾರ ಸೇರಿದಂತೆ ಅನೇಕ ವಿಚಾರಗಳು ಹೊರ ಬಂದಿದೆ.
ಈ ಕುರಿತು ಬಿಜೆಪಿ ನಾಯಕ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಕುರಿತು ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ ಅವರು ‘ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು, ಕಚೇರಿಯಲ್ಲೇ ಬಹಿರಂಗಪಡಿಸಿದ್ದಾರೆ ಎಂದರೆ ಕೆಪಿಸಿಸಿಗೆ ಎಂಥ ದುರ್ಗತಿ ಬಂದಿರಬಹುದು’ ಎಂದು ಟೀಕಿಸಿದ್ದಾರೆ.
ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು @INCKarnataka ಕಚೇರಿಯಲ್ಲೇ ಬಹಿರಂಗಪಡಿಸಿದ್ದಾರೆ ಎಂದರೆ ಕೆಪಿಸಿಸಿಗೆ ಎಂಥ ದುರ್ಗತಿ ಬಂದಿರಬಹುದು?#CorruptDKS
— C T Ravi 🇮🇳 ಸಿ ಟಿ ರವಿ (@CTRavi_BJP) October 13, 2021
Laxmi News 24×7