ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಾ.ಮನಮೋಹನ್ ಸಿಂಗ್ ಅವರ ಆರೋಗ್ಯ ಬುಧವಾರ ಹದಗೆಟ್ಟಿದೆ.
ಡಾ.ನಿತೀಶ್ ನಾಯಕ್ ಅವರ ನೇತೃತ್ವದ ವೈದ್ಯರ ತಂಡದ ಮೇಲ್ವಿಚಾರಣೆಯಲ್ಲಿ ಸಿಂಗ್ ಆರೋಗ್ಯ ತಪಾಸಣೆ ನಡೆಸಲಾಗಿದೆ. ಅವರು ಉಸಿರಾಟದ ತೊಂದರೆಗೊಳಲಾಗಿದ್ದಾರೆ. ಮತ್ತು ಎದೆನೋವು ಕಾಣಿಸಿಕೊಂಡಿದೆ.
ಡಾ.ಮನಮೋಹನ್ ಸಿಂಗ್ ಅವರ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ನೇತೃತ್ವದ ವೈದ್ಯಕೀಯ ತಂಡ ಕಾರ್ಯೋನ್ಮುಖವಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಸಿಂಗ್ ಎರಡು ವಾರಗಳ ಹಿಂದೆ ಸೆಪ್ಟೆಂಬರ್ 26 ರಂದು 89 ನೇ ವರ್ಷಕ್ಕೆ ಕಾಲಿಟ್ಟಿದ್ದರು.
Laxmi News 24×7