ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಾಡಹಗಲೇ ಯುವತಿಯೊಬ್ಬಳಿಗೆ ನಡುರಸ್ತೆಯಲ್ಲಿ ಯುವಕರು ಕಿರುಕುಳ ನೀಡಿದ್ದಾರೆ.
ಬೆಂಗಳೂರಿನ ಕುರುಬರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಡ್ರಗ್ಸ್ ಮತ್ತಿನಲ್ಲಿ ೮ ಮಂದಿ ಹುಡುಗರು ಕಿರುಕುಳ ನೀಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.
ಕಿರುಕುಳ ಕೊಟ್ಟ ಡ್ರಗ್ಸ್ ಗ್ಯಾಂಗ್ ವಿರುದ್ಧ ಯುವತಿ ನಿಂತು ಪ್ರಶ್ನಿಸಿದ್ದಾಳೆ. ಈ ವೇಳೆ ಯುವಕರು ಯುವತಿಯ ಮೇಲೆ ಹಲ್ಲೆಗೆ ಯತ್ನಿಸಿ ಅವಾಚ್ಯ ಪದಗಳಿಂದ ನಿಂದನೆ ಮಾಡಿದ್ದಾರೆ.
ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿದ್ದು ಇಬ್ಬರು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಆರು ಜನ ಯುವಕರು ಪರಾರಿಯಾಗಿದ್ದಾರೆ. ಯುವಕರಿಗೆ ಯುವತಿ ಪ್ರಶ್ನಿಸಿ ತರಾಟೆಗೆ ತೆಗೆದುಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.