Breaking News

ತೈವಾನ್‍ನಲ್ಲಿ ಬೆಂಕಿ ಅವಗಡ, 14 ಮಂದಿ ಸಾವು..!

Spread the love

ಥೈಪೆ, ಅ.14- ತೈವಾನ್‍ನ ದಕ್ಷಿಣ ವಲಯದಲ್ಲಿ ನಡೆದಿರುವ ಬೆಂಕಿ ಅವಗಡದಿಂದ ಸುಮಾರು 14 ಮಂದಿ ಮೃತಪಟ್ಟು, 51ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಇಂದು ಮುಂಜಾನೆ 3 ಗಂಟೆ ಸುಮಾರಿನಲ್ಲಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಆದರೆ ತಳಮಹಡಿಯಿಂದ ಆರಂಭವಾದ ಬೆಂಕಿ ಇಡೀ ಕಟ್ಟಡವನ್ನು ಆಕ್ರಮಿಸಿದೆ.

ದುರ್ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ಕೆಲವರು ಸ್ಥಳದಲ್ಲೇ ಸಜೀವ ದಹನವಾದರೆ ಇನ್ನೂ ಕೆಲವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 51 ಮಂದಿ ಗಾಯಗೊಂಡಿದ್ದು, ಗಂಭೀರ ಪರಿಸ್ಥಿತಿಯಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿಯ ಕೆನ್ನಾಲಿಗೆ ನಿಯಂತ್ರಣ ಮೀರಿ ವ್ಯಾಪಿಸಿತ್ತು. ಕಟ್ಟಡದ ಬಹಳಷ್ಟು ಮಹಡಿಗಳನ್ನು ಅದು ಹಾನಿ ಮಾಡಿದೆ. ಆರಂಭಿಕ ತನಿಖೆಯಲ್ಲಿ ಬೆಂಕಿ ಹತ್ತಿಕೊಳ್ಳಲು ಕಾರಣಗಳು ತಿಳಿದುಬಂದಿಲ್ಲ. ಸ್ಥಳೀಯರ ಪ್ರಕಾರ ಮುಂಜಾನೆ 3 ಗಂಟೆ ಸುಮಾರಿಗೆ ಸ್ಫೋಟದ ಸದ್ದು ಕೇಳಿಸಿದೆ. ಬಳಿಕ ಬೆಂಕಿ ಹತ್ತಿಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸುಮಾರು 40 ವರ್ಷ ಹಳೆಯದಾದ ಕಟ್ಟಡದ ತಳ ಮಹಡಿಯಲ್ಲಿ ವಾಣಿಜ್ಯ ಮಳಿಗೆಗಳಿವೆ, ಮೇಲಿನ ಮಹಡಿಯಲ್ಲಿ ಜನವಸತಿಯ ಅಪಾರ್ಟ್‍ಮೆಂಟ್‍ಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ