Breaking News

ಡಿ.ಕೆ ಶಿವಕುಮಾರ್ ಪರ ಮಾಜಿ ಸಿಎಂ ಕುಮಾರಸ್ವಾಮಿ ಬ್ಯಾಟಿಂಗ್

Spread the love

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪರ ಮಾಜಿ ಸಿಎಂ ಕುಮಾರಸ್ವಾಮಿ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಡಿ.ಕೆ. ಶಿವಕುಮಾರ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದ ಕುಮಾರಸ್ವಾಮಿ ದಿಢೀರ್ ಸಾಫ್ಟ್ ಆಗಿದ್ದಾರೆ ಎನ್ನಲಾಗಿದೆ.

ಉಗ್ರಪ್ಪ, ಸಲೀಂ ಪಿಸುಮಾತು ವಿಡಿಯೋ ಪ್ರಸಾರವಾಗುತ್ತಿದ್ದಂತೆ ಡಿಕೆಎಸ್​ ಪರ ಸಾಫ್ಟ್ ಆಗಿರುವ ಕುಮಾರಸ್ವಾಮಿ ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಪಾಪ ಡಿ.ಕೆ ಶಿವಕುಮಾರ್ ಪಕ್ಷ ಕಟ್ಟುತ್ತಿದ್ದಾರೆ’.. ‘ಸಿದ್ದರಾಮಯ್ಯ ಪಟಾಲಂ ಡಿಕೆ ಶಿವಕುಮಾರ್ ವಿರುದ್ಧ ಮಾತನಾಡಿರುವ ವಿಡಿಯೋ ಬಿಟ್ಟಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗುವುದಕ್ಕೆ ಸಿದ್ದರಾಮಯ್ಯ ಬಿಡುವುದಿಲ್ಲ ಎಂದು ಹೇಳುವ ಮೂಲಕ ಹೆಚ್​ಡಿಕೆ ಡಿಕೆಸ್​ ಪರ ಸಾಫ್ಟ್ ಕಾರ್ನರ್ ತೋರಿಸಿದ್ದಾರೆ.

 

ಹೆಚ್​ಡಿಕೆಯವರ ಈ ದಿಢೀರ್ ನಡೆ ಬಗ್ಗೆ ಕೈಪಡೆಯಲ್ಲಿ ಪರಿಸ್ಥಿತಿಯ ಲಾಭ ಪಡೆಯಲು ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ದಾಳ ಉರುಳಿಸಿದ್ರಾ ಎಂಬ ಚರ್ಚೆ ಶುರುವಾಗಿದೆ ಎನ್ನಲಾಗಿದೆ. ನಮ್ಮ ಪಕ್ಷವನ್ನ ಮುಗಿಸಲು ಹೊರಟಿದ್ದಾರೆಂದು, ಒಕ್ಕಲಿಗ ಮತಗಳನ್ನ ಡಿಕೆ ಸೆಳೆಯಲು ಸಾಧ್ಯವೇ ಇಲ್ಲವೆಂದು ಮಾತಿನ ಸಮರ ನಡೆಸುತ್ತಿದ್ದ ಕುಮಾರಸ್ವಾಮಿ ಇದೀಗ ಡಿಕೆ ಶಿವಕುಮಾರ್ ಪರ ಅನುಕಂಪ ತೋರಿಸುತ್ತಲೇ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ