Breaking News

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ನಿಶ್ಚಿತಾರ್ಥ ಸಮಾರಂಭ……….

Spread the love

ಶಿವಮೊಗ್ಗ: ಇಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹ ನಿಶ್ಚಿತಾರ್ಥ ಸಮಾರಂಭ ಜಿಲ್ಲೆಯಲ್ಲಿ ನಡೆಯಲಿದೆ.ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹಾಗೂ ಡಾ. ಹಿತಾ ವಿವಾಹ ನಿಶ್ಚಿತಾರ್ಥ ಇಂದು ನಡೆಯಲಿದೆ. ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಮ್ಮಿ ಹೆಬ್ಬಾಳ್ಕರ್ ಪುತ್ರನಿಗೆ ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಸಹೋದರ ಶಿವಕುಮಾರ್ ಪುತ್ರಿ ಜೊತೆ ನಿಶ್ಚಿತಾರ್ಥ ನಡೆಯಲಿದೆ.

 

 

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹಾಗೂ ಡಾ. ಹಿತಾ ವಿವಾಹ ನಿಶ್ಚಿತಾರ್ಥ ಇಂದು ನಡೆಯಲಿದೆ. ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಮ್ಮಿ ಹೆಬ್ಬಾಳ್ಕರ್ ಪುತ್ರನಿಗೆ ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಸಹೋದರ ಶಿವಕುಮಾರ್ ಪುತ್ರಿ ಜೊತೆ ನಿಶ್ಚಿತಾರ್ಥ ನಡೆಯಲಿದೆ.

ಶಿವಮೊಗ್ಗ ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆಂಷನ್ ಹಾಲ್‍ನಲ್ಲಿ ಗುರು-ಹಿರಿಯರು ನಿಶ್ಚಯಿಸಿರುವ ಮುಹೂರ್ತದಲ್ಲಿ ಸಮಾರಂಭ ನಡೆಯಲಿದೆ. ಕೊರೊನಾ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ನಿಶ್ಚಿತಾರ್ಥ ಸಮಾರಂಭ ನಡೆಸಲಾಗುತ್ತಿದೆ.

ಈಗಾಗಲೇ ಪುತ್ರನ ನಿಶ್ಚಿತಾರ್ಥಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ನಿಶ್ಚಿತಾರ್ಥದ ತಯಾರಿ ಭರದಿಂದ ಸಾಗಿದೆ. ಈ ಮೂಲಕ ಇಬ್ಬರು ರಾಜಕೀಯ ಕುಟುಂಬದ ನಡುವೆ ಬಾಂಧವ್ಯ ಆರಂಭವಾಗಲಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ 56 ಸಾವಿರ ಹುದ್ದೆಗಳ ಭರ್ತಿ ಐತಿಹಾಸಿಕ ನಿರ್ಧಾರ: ಮಧು ಬಂಗಾರಪ್ಪ

Spread the loveಶಿವಮೊಗ್ಗ: ರಾಜ್ಯದಲ್ಲಿ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡುತ್ತಿರುವುದು ಐತಿಹಾಸಿಕ ನಿರ್ಧಾರವಾಗಿದೆ. ದೇಶದ ಯಾವುದೇ ರಾಜ್ಯದಲ್ಲಿ ಇಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ