ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಗುರುವಾರ ಸವದತ್ತಿ ಯಲ್ಲಮ್ಮದೇವಿ ದರ್ಶನ ಪಡೆದಿದ್ದು, ಕೊರೋನಾ ರೂಲ್ಸ್‌ಗಳನ್ನು ಮರೆತು ದೇವಾಲಯಕ್ಕೆ ತೆರಳಿದ್ದಾರೆ.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ದೇಗುಲಕ್ಕೆ ತೆರಳಿದ್ದ ಶಶಿಕಲಾ ಜೊಲ್ಲೆ ಮಾಸ್ಕ್ ಧರಿಸದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ದೇವಿಯ ದರ್ಶನ ಪಡೆದಿದ್ದಾರೆ.
ಮಾಸ್ಕ್ ಇಲ್ಲದೇ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ಇಲ್ಲಿ ಅನುಮತಿ ಇಲ್ಲ. ಆದರೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಯವರಿಂದಲೇ ಕೋವಿಡ್ ರೂಲ್ಸ್ ಬ್ರೇಕ್ ಆಗಿದೆ.
ಸಚಿವೆ ಶಶಿಕಲಾ ಜೊಲ್ಲೆ ಪತಿ, ಸಂಸದ ಅಣ್ಣಾಸಾಹೇಬ್ ಜೊಲ್ಲೆ ಕೂಡ ಇವರಿಗೆ ಸಾಥ್ ನೀಡಿದ್ದು, ಈ ವೇಳೆ ಯಾವುದೆ ಕೊರೋನಾ ನಿಯಮಗಳನ್ನು ಪಾಲಿಸಿಲ್ಲ.
ಸ್ಥಳೀಯ ಶಾಸಕ ಆನಂದ ಮಾಮನೆ ಹಾಗು ಜೊಲ್ಲೆ ದಂಪತಿಗೆ ಇಲ್ಲಿ ಸನ್ಮಾನವನ್ನು ಮಾಡಲಾಗಿದ್ದು ಈ ವೇಳೆ ಸಂಪೂರ್ಣವಾಗಿ ಕೋವಿಡ್ ರೂಲ್ಸ್ ಬ್ರೇಕ್ ಮಾಡಲಾಗಿದೆ.
ಸಾಮಾನ್ಯರಿಗೆ ತಿಳಿ ಹೇಳಬೇಕದಾ ಜನಪ್ರತಿನಿಧಿಗಳೇ ಈ ರೀತಿ ರೂಲ್ಸ್ ಬ್ರೇಕ್ ಮಾಡಿದರೆ ಇನ್ನು ಸಾಮಾನ್ಯರು ಹೇಗೆ. ಅಲ್ಲದೇ ದೇಗುಲದಲ್ಲಿ ಜನರಿಗೊಂದು ನ್ಯಾಯ, ಜನಪ್ರತಿನಿಧಿಗಳಿಗೆ ಒಂದು ನ್ಯಾಯವೇ ಎನ್ನುವ ಪ್ರಶ್ನೆ ಮೂಡಿದೆ.