Breaking News

ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು , ಮತ್ತೊಬ್ಬನ ಸ್ಥಿತಿ ಗಂಭೀರ

Spread the love

ರಾಯಚೂರು: ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ಇಂದು ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿ ಇಬ್ಬರು ಸಾವನಪ್ಪಿದ್ದು ಮತ್ತೊಬ್ಬ ಸವಾರನಿಗೆ ಗಂಭೀರ ಗಾಯವಾಗಿದೆ.ಮೃತರು ರಾಯಚೂರು ನಗರದ ತಿಮ್ಮಪೂರ ಪೇಟೆ ನಿವಾಸಿಗಳಾದ ದೀಪಕ್ (22) ಮತ್ತು ಹುಸೇನ್(23)ಎಂದು ತಿಳಿದು ಬಂದಿದೆ.

ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು ರೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಲ್ಲಿ ಬಿದ್ದು ಒದ್ದಾಡುತ್ತಿದ್ದ ಗಾಯಾಳುವಿಗೆ ನೀರು ಹಾಕಿ ಸ್ಥಳೀಯರು ಮಾನವೀಯತೆ ಮೆರೆದಿದ್ದಾರೆ.‌ಕೂಡಲೇ ಆಂಬುಲೆನ್ಸ್​ಗೆ ಕರೆ ಮಾಡಿ ಗಾಯಾಳುವನ್ನ ಆಸ್ಪತ್ರೆಗೆ ರವಾನಿಸಿದರು. ಇನ್ನಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನ ಶವಾಗಾರಕ್ಕೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ