Breaking News

ಡೆಂಘೆ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

Spread the love

ಗದಗ: ಲಕ್ಷಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ಡೆಂಘೆ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಶುಕ್ರವಾರ ಮೃತಪಟ್ಟಿದ್ದಾಳೆ.

ವೈಶಾಲಿ ಶಿವಪ್ಪ ಲಮಾಣಿ (16) ಮೃತೆ. ಈಕೆ ಮುಳಗುಂದದ ಮುರಾರ್ಜಿ ವಸತಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದಳು. ಅ.5ರಂದು ವಸತಿ ಶಾಲೆಯಲ್ಲಿಯೇ ಜ್ವರ ಕಾಣಿಸಿಕೊಂಡಿದ್ದರಿಂದ ಮನೆಗೆ ಆಗಮಿಸಿದ್ದಳು.

7ರಂದು ಲಕ್ಷೆಮೕಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾಳೆ. ಗುಣವಾಗದ್ದರಿಂದ ಅ.14ರಂದು ಧಾರವಾಡ ಎಸ್​ಡಿಎಂಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಸಾವನ್ನಪ್ಪಿದ್ದಾಳೆ ಎಂದು ಪಾಲಕರು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ