Breaking News

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಸರ್ಕಾರವೇ ಪ್ರತಿಷ್ಠಾಪನೆ ಮಾಡಬೇಕು

Spread the love

ಬೆಳಗಾವಿ:  ಪೀರನವಾಡಿ ಗ್ರಾಮದಲ್ಲಿ  ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಸರ್ಕಾರವೇ ಪ್ರತಿಷ್ಠಾಪನೆ ಮಾಡಬೇಕೆಂದು ಆಗ್ರಹಿಸಿ ರಾಯಣ್ಣನ ಸಾವಿರಾರು ಅಭಿಮಾನಿಗಳು ಬೆಳಗಾವಿಯಲ್ಲಿ ಬೃೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ.‌

ಬೆಳಗಾವಿಯ ಕಾಂಗ್ರೆಸ್ ರಸ್ತೆಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ಹೊರಡಿಸಿರುವ ಸಾವಿರಾರು ಅಭಿಮಾನಿಗಳು,ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಿದ್ದಾರೆ.

ಪೀರನವಾಡಿಯಲ್ಲಿ,ರಾಯಣ್ಣನ ಮೂರ್ತಿಯನ್ನು ಸರ್ಕಾರವೇ ಪ್ರತಿಷ್ಠಾಪನೆ ಮಾಡಬೇಕು,ಇಲ್ಲವಾದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಲು ಅಭಿಮಾನಿಗಳಿಗೆ ಅನುಮತಿ ನೀಡಬೇಕೆಂದು ಸಾವಿರಾರು ಅಭಿಮಾನಿಗಳು ಇಂದು ಬೆಳಗಾವಿ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲಿದ್ದಾರೆ

ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಹಾಲುಮತ ಸಮಾಜ,ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಭಾಗವಹಿಸಿದ್ದು ಮೂರ್ತಿ ಪ್ರತಿಷ್ಠಾಪನೆಗೆ ಬೆಳಗಾವಿಯಲ್ಲಿ ರಾಯಣ್ಣನ ಅಭಿಮಾನಿಗಳು ಹೋರಾಟದ ಕಿಡಿ ಹೊತ್ತಿಸಿದ್ದಾರೆ .

ಪೀರನವಾಡಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಬೆಂಗಳೂರಿನಲ್ಲೂ ವಿವಿಧ ಸಂಘಟನೆಗಳು ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಮುತ್ತಿಗೆ ಹಾಕಲು ನಿರ್ದರಿಸಿದ್ದು ಪೀರನವಾಡಿಯ ಮೂರ್ತಿ ವಿವಾದ ಈಗ ರಾಜ್ಯವ್ಯಾಪಿಯಾಗಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ