Breaking News
Home / ರಾಜಕೀಯ / ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ಮುಂದಿನ ಚುನಾವಣೆಗಳಲ್ಲಿ ಸೋಲಲಿದೆ

ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ಮುಂದಿನ ಚುನಾವಣೆಗಳಲ್ಲಿ ಸೋಲಲಿದೆ

Spread the love

ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಯ ಕಾರ್ಯಕ್ಷಮತೆ ಅದು ಮುಂದಿನ ಚುನಾವಣೆಗಳಲ್ಲಿ ಸೋಲಲಿದೆ ಎನ್ನುವುದನ್ನು ಖಚಿತಪಡಿಸುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ದಿ.ಪ್ರಿಂಟ್‌ ಗೆ ನೀಡಿರುವ ಸಂದರ್ಶನದಲ್ಲಿ, “ನರೇಂದ್ರ ಮೋದಿ ಜನಪ್ರಿಯತೆ ಕುಸಿದಿದೆ. 2019ರಲ್ಲಿ ಅವರಿಗಿದ್ದ ಜನಪ್ರಿಯತೆಗೆ ಹೋಲಿಸುವುದಾದರೆ ಈಗ ಅವರ ಜನಪ್ರಿಯತೆಗೆ ಪೆಟ್ಟು ಬಿದ್ದಿದೆ. ಹಣದುಬ್ಬರ, ಹೆಚ್ಚುತ್ತಿರುವ ನಿರುದ್ಯೋಗ ಪ್ರಮಾಣ ಹಾಗೂ ಅಸಮರ್ಪಕ ಕೋವಿಡ್‌ ನಿರ್ವಹಣೆಯಿಂದಾಗಿ ನಾಗರಿಕರು ಅಸಮಾಧನಗೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ಸುಳ್ಳುಗಳನ್ನು ಜನರು ಅರಿತುಕೊಳ್ಳಲು ಆರಂಭಿಸಿದ್ದಾರೆ. ನರೇಂದ್ರ ಮೋದಿ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳ ಸಹಾಯದಿಂದ ದೇಶದಲ್ಲಿ ಭವ್ಯತೆಯ ಭ್ರಮೆಯನ್ನು ಸೃಷ್ಟಿಸಿ ಕಾಂಗ್ರೆಸ್‌ಗೆ ಪರ್ಯಾಯವಾಗಿ ಬಿಜೆಪಿಯನ್ನು ಬಿಂಬಿಸಿದ್ದರು. ಮೋದಿಯಷ್ಟು ಯಾರೂ ಸುಳ್ಳು ಹೇಳುವುದಿಲ್ಲ ಎಂಬ ಸತ್ಯವನ್ನು ಜನರು ಈಗ ಅರಿತುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ವಿರುದ್ಧ ಕಾಂಗ್ರೆಸ್‌ನ ತಂತ್ರಗಾರಿಕೆ ಏನು ಎಂಬ ಪ್ರಶ್ನೆಗೆ, “ನಾವು ಮಾಡಬೇಕಾಗಿರುವುದು ಕೋವಿಡ್ -19 ನಿಂದ ಭ್ರಷ್ಟಾಚಾರದವರೆಗೆ ಈ ಸರ್ಕಾರ ಮಾಡಿರುವ ವೈಫಲ್ಯಗಳನ್ನು ಪರಿಣಾಮಕಾರಿಯಾಗಿ ಎತ್ತಿ ತೋರಿಸುವುದು. ರೈತರು, ಯುವಕರು, ಮಹಿಳೆಯರು, ಕಾರ್ಮಿಕರು ಎಲ್ಲರೂ ಈ ಸರ್ಕಾರದಿಂದ ಬೇಸತ್ತಿದ್ದಾರೆ, ” ಎಂದು ಅವರು ಹೇಳಿದ್ದಾರೆ.

ದೇಶದಾದ್ಯಂತ ಅನೇಕ ರಾಜ್ಯಗಳಲ್ಲಿ ಕಾಂಗ್ರೆಸ್ ನೆಲಕಚ್ಚಿಕೊಳ್ಳುತ್ತಿದೆ ಏಕೆ ಎಂದು ಕೇಳಿದಾಗ, “ಅನೇಕ ರಾಜ್ಯಗಳಲ್ಲಿ, ನಮ್ಮ ಪಕ್ಷದ ನಾಯಕರು ಪ್ರಾದೇಶಿಕ ಪಕ್ಷಗಳನ್ನು ರಚಿಸಲು ಪಕ್ಷದಿಂದ ಹೊರಹೋದರು. ಆಂಧ್ರಪ್ರದೇಶದಲ್ಲಿ ವೈಎಸ್‌ಆರ್‌ಸಿಪಿ ಆಗಿರಲಿ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಆಗಿರಲಿ ಅಥವಾ ಮಹಾರಾಷ್ಟ್ರದಲ್ಲಿ ಎನ್‌ಸಿಪಿಯಾಗಿರಲಿ, ಅವರೆಲ್ಲರೂ ಕಾಂಗ್ರೆಸ್‌ನಲ್ಲಿದ್ದರು ಎಂದು ಅವರು ಹೇಳಿದ್ದಾರೆ. “ವಿವಿಧ ಕಾರಣಗಳಿಗಾಗಿ, ಅವರು ಬೇರೆ ಬೇರೆ ಮಾರ್ಗಗಳನ್ನು ಹೊಂದಿದ್ದಾರೆ ಆದರೆ ಅವರು ಇನ್ನೂ ಕಾಂಗ್ರೆಸ್‌ನ ಮೌಲ್ಯಗಳು ಮತ್ತು ಸಿದ್ಧಾಂತವನ್ನು ಎತ್ತಿಹಿಡಿಯುತ್ತಾರೆ.” ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Spread the love ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ