Breaking News

ಫ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ : 2 ಸಾವು, 120 ಜನರ ರಕ್ಷಣೆ

Spread the love

ಸೂರತ್ : ಗುಜರಾತಿನ ಸೂರತ್ ಜಿಲ್ಲೆಯ ಪ್ಯಾಕೇಜಿಂಗ್ ಪ್ಯಾಕ್ಟರಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಈ ದುರ್ಘಟನೆಯಲ್ಲಿ ೧೨೦ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದ್ದು, ಕೆಲವು ಕಾರ್ಮಿಕರಿಗೆ ಗಾಯಗಳಾಗಿವೆ.

ಐದು ಅಂತಸ್ತುಗಳ ಕಟ್ಟಡದಲ್ಲಿನ ಪ್ಯಾಕ್ಟರಿಯ ಮೊದಲನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಇತರ ಮಹಡಿಗಳಿಗೆ ಹರಡಿದೆ. ಕಟ್ಟಡದೊಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ರಕ್ಷಿಸಲು ಕ್ರೇನ್‌ಗಳನ್ನು ಬಳಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ಯಾಕೇಜಿಂಗ್ ಫ್ಯಾಕ್ಟರಿ ಸೂರತ್‌ನ ಕಡೋದರದ ವರೇಲಿ ಎಂಬಲ್ಲಿದೆ. ಬೆಂಕ ಆಕಸ್ಮಿಕದ ಸುದ್ದಿ ತಿಳಿದ ಕೂಡಲೇ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣ ಏನೆಂಬ ಬಗ್ಗೆ ತನಿಖೆ ಮುಂದುವರಿದಿದೆ.

 

Spread the love

About Laxminews 24x7

Check Also

ಲಾಠಿ ಚಾರ್ಜ್ ಪ್ರಕರಣದ ವರದಿ ಸರ್ಕಾರಕ್ಕೆ ಸಲ್ಲಿಕೆ; ಅನ್ಯಾಯ ನಡೆದ ಸ್ಥಳದಲ್ಲೇ ನ್ಯಾಯಕ್ಕಾಗಿ ಮತ್ತೆ ಹೋರಾಟ – ಜಯಮೃತ್ಯುಂಜಯ ಸ್ವಾಮೀಜಿ

Spread the loveಲಾಠಿ ಚಾರ್ಜ್ ಪ್ರಕರಣದ ವರದಿ ಸರ್ಕಾರಕ್ಕೆ ಸಲ್ಲಿಕೆ; ಅನ್ಯಾಯ ನಡೆದ ಸ್ಥಳದಲ್ಲೇ ನ್ಯಾಯಕ್ಕಾಗಿ ಮತ್ತೆ ಹೋರಾಟ – …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ