ವಿಜಯಪುರ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಸಿಂದಗಿ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಜಿಲ್ಲೆಯ ಸಿಂದಗಿ ತಾಲೂಕಿನ ದೇವರನಾವದಗಿ ಗ್ರಾಮದಲ್ಲಿ, ಉಪ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರಚುನಾವಣೆ ಪ್ರಚಾರ ನಡೆಸಿ ಅವರು ಮಾತನಾಡಿದರು.
ಸಿಂದಗಿ ಮತಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರಿಗೆ ಮತದಾರರು ಆಶೀರ್ವದಿಸುವ ಮೂಲಕ ಬಿಜೆಪಿಯನ್ನು ಗೆಲ್ಲಿಸಬೇಕು ಎಂದರು.
ಶತ್ರು ರಾಷ್ಟ್ರಗಳ ಹುಟ್ಟಡಗಿಸಲು ಪ್ರಧಾನಿ ಮೋದಿ, ಸರ್ಜಿಕಲ್ ಸ್ಟ್ರೈಕ್ ಹಾಗೂ ಏರ್ ಸ್ಟ್ರೈಕ್ ಮಾಡಿ, ದಿಟ್ಟತನವನ್ನು ತೋರಿದ್ದಾರೆ. ಇಂದು ದೇಶ ಸುರಕ್ಷತೆಯಲ್ಲಿದೆ, ನೀವು ಕೆಣಕಿದರೆ ನಾವು ಬಿಡುವುದಿಲ್ಲ ಎನ್ನುವ ಸಂದೇಶವನ್ನು ಪ್ರಧಾನಿ ಮೋದಿಯವರು ರವಾನಿಸಿದ್ದಾರೆ ಎಂದರು.
Laxmi News 24×7