ಬೆಳಗಾವಿ: ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಕೊರೊನಾ ಶಂಕಿತ ವೃದ್ಧನ ಶವವನ್ನು ಕುಟುಂಬಸ್ಥರು ಸೈಕಲ್ ಮೇಲೆ ಸಾಗಿಸಿ ಅಂತ್ಯಸಂಸ್ಕಾರ ನೆರೆವೆರಿಸಿದ್ದರು. ಇದಕ್ಕೆ ಸಚಿವರು ಕಳವಳ ವ್ಯಕ್ತ ಪಡಿಸಿದ್ದು, ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.
ಮೃತವ್ಯಕ್ತಿಯೊಬ್ಬರ ಶವವನ್ನು ಕುಟುಂಬಸ್ಥರು ಭಾನುವಾರ ಸೈಕಲ್ ಮೇಲೆ ತೆಗೆದುಕೊಂಡು ಹೋಗಿ ಶವಸಂಸ್ಕಾರ ಮಾಡಿರುವ ವರದಿಯನ್ನು ಗಮನಿಸಿದ್ದೇನೆ. ನಾಗರಿಕ ಸಮಾಜದಲ್ಲಿರುವ ನಾವು ಸದಾ ಹೃದಯವಂತಿಕೆಯಿಂದ ಜೀವಿಸಬೇಕು.
ಮೃತರ ಸಂಸ್ಕಾರವನ್ನೂ ಗೌರವಯುತವಾಗಿ ಮಾಡಬೇಕು. ಕೊರೊನಾ ಸೋಂಕಿನಿಂದಾಗಲೀ, ಬೇರೆ ಯಾವುದೇ ರೀತಿಯ ಅನಾರೋಗ್ಯದಿಂದ ಮೃತರಾದ ವ್ಯಕ್ತಿಗಳ ಅಂತ್ಯಕ್ರಿಯೆಗೆ ಅಧಿಕಾರಿಗಳು ಸೂಕ್ತ ಸಹಕಾರ ನೀಡಬೇಕು ಎಂದಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ಇಂತಹ ಅಮಾನವೀಯ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ಎಂದು ಸೂಚನೆ ನೀಡಿದ್ದಾರೆ.
ಅಂತ್ಯಕ್ರಿಯೆ ನಡೆಸಲು ಏನಾದರೂ ತೊಂದರೆಗಳು ಆದ ಸಂದರ್ಭದಲ್ಲಿ ಅದಕ್ಕಾಗಿಯೇ ಒಂದು ದೂರವಾಣಿ ಸಂಖ್ಯೆ ರೂಪಿಸಿ. ಅದಕ್ಕಾಗಿ ಅಧಿಕಾರಿಯೊಬ್ಬರನ್ನು ನಿಯೋಜಿಸಲು ಆದೇಶಿಸಿದ್ದೇನೆ ಎಂದು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.