Breaking News
Home / ಹುಬ್ಬಳ್ಳಿ / ಟಿಕೆಟ್ ರಹಿತ ಪ್ರಯಾಣ – ನೈರುತ್ಯ ರೈಲ್ವೆ ವಲಯದಿಂದ 5.55 ಕೋಟಿ ದಂಡ ವಸೂಲಿ!

ಟಿಕೆಟ್ ರಹಿತ ಪ್ರಯಾಣ – ನೈರುತ್ಯ ರೈಲ್ವೆ ವಲಯದಿಂದ 5.55 ಕೋಟಿ ದಂಡ ವಸೂಲಿ!

Spread the love

ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯದ ವ್ಯಾಪ್ತಿಯಲ್ಲಿ 3 ತಿಂಗಳಲ್ಲಿ ಟಿಕೆಟ್ ರಹಿತ ಪ್ರಯಾಣಿಕರಿಂದ ಬರೋಬ್ಬರಿ 5.55 ಕೋಟಿ ದಂಡ ವಸೂಲಿ ಮಾಡಲಾಗಿದೆ.

ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ ಒಟ್ಟು 1,16,521 ಜನ ಟಿಕೆಟ್ ರಹಿತ ಪ್ರಯಾಣಿಕರನ್ನು ಹಿಡಿಯಲಾಗಿದೆ. ಇವರಿಂದ 5.52 ಕೋಟಿ ದಂಡ ವಸೂಲಿ ಮಾಡಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 2435 ಪ್ರಕರಣಗಳನ್ನು ದಾಖಲಿಸಿ 13.74 ಲಕ್ಷ ದಂಡ ವಸೂಲಿ ಮಾಡಲಾಗಿತ್ತು. ಟಿಕೆಟ್ ತಪಾಸಣಾ ಸಿಬ್ಬಂದಿ ಕಾರ್ಯ ನಿರ್ವಹಣೆ ಈ ಸಲ ಪ್ರಶಂಸನೀಯವಾಗಿದೆ ಎಂದು ವಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಹುಬ್ಬಳ್ಳಿ ವಿಭಾಗದಲ್ಲಿ 3ತಿಂಗಳಲ್ಲಿ 20457 ಪ್ರಕರಣ ದಾಖಲಿಸಿ 89.57 ಲಕ್ಷ, ಬೆಂಗಳೂರು ವಿಭಾಗದಲ್ಲಿ 61502 ಪ್ರಕರಣಗಳನ್ನು ದಾಖಲಿಸಿ 316.05 ಲಕ್ಷ ಅಂದರೆ 3.16 ಕೋಟಿ, 24659 ಪ್ರಕರಣ ದಾಖಲಿಸಿ 1.03 ಕೋಟಿ, ಸ್ಕಾuಟಿಜeಜಿiಟಿeಜಡ್ ತಂಡವೂ 9903 ಪ್ರಕರಣ ದಾಖಲಿಸಿ 43.33 ಲಕ್ಷ ರೂ. ಸೇರಿದಂತೆ ಒಟ್ಟು 1,16521 ಪ್ರಕರಣ ದಾಖಲಿಸಿದೆ. ಇದರಿಂದ ಒಟ್ಟು 552.27 ಲಕ್ಷ ಅಂದರೆ 5.52 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತ್ಯು. ನಾಲ್ವರಿಗೆ ಗಾಯ

Spread the love ಧಾರವಾಡ : ಸಿಲಿಂಡ‌ರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ತಾಲೂಕಿನ ಕಲ್ಲೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ