Breaking News

ರಾಯಚೂರಿನಲ್ಲಿ ನಾಲ್ಕು ದಿನಗಳಿಂದ ಸತತ ಮಳೆ: ಮನೆ ಕುಸಿದು ಮಹಿಳೆ ಸಾವು

Spread the love

ರಾಯಚೂರು: ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿ ಹಲವು ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ಭಾರೀ ಮಳೆಯಿಂದಾಗಿ ಮನೆ ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ.ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ದೇವದುರ್ಗ ತಾಲೂಕಿನ ರಾಮದುರ್ಗ ಗ್ರಾಮದಲ್ಲಿ ಮಣ್ಣಿನ ಮನೆ ಕುಸಿದು ಬಿದ್ದಿದ್ದು, 32 ವರ್ಷದ ಮಹಿಳೆ ಶಕುಂತಲಾ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾತ್ರಿ ಮನೆಯಲ್ಲಿ ಐದು ಜನ ಮಲಗಿದ್ದರು. ಈ ವೇಳೆ ಸತತ ಮಳೆಯಿಂದ ನೆನೆದಿದ್ದ ಮನೆ ಕುಸಿತವಾಗಿದೆ. ಮನೆ ಕುಸಿಯುವುದನ್ನು ಕಂಡು ಮೂವರು ಮಕ್ಕಳು ಹಾಗೂ ಸಾವನ್ನಪ್ಪಿದ ಮಹಿಳೆಯ ಪತಿ ಹೊರಗಡೆ ಬಂದಿದ್ದಾರೆ. ಮಹಿಳೆಯೂ ಎದ್ದು ಬರುವಾಗ ಅಷ್ಟರಲ್ಲೇ ಮನೆ ಕುಸಿದಿದೆ. ಮಹಿಳೆಯ ಮೇಲೆ ಮನೆ ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ನಡೆದು ಐದಾರು ಗಂಟೆಗಳಾದರೂ ಸ್ಥಳಕ್ಕೆ ಅಧಿಕಾರಿಗಳು, ಜನಪ್ರತಿನಿಧಿಗಳು ಬಂದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Spread the loveರಾಯಚೂರು: ತುಂಗಭದ್ರಾ ನದಿಗೆ  ಸ್ನಾನಕ್ಕೆ ತೆರಳಿದ್ದ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ  ಕೊಸಗಿ ಮಂಡಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ