Breaking News

ಜೈಲುಗಳಲ್ಲಿ ಇನ್ನು ಸಿಬಂದಿಗೂ ಮೊಬೈಲ್‌ ನಿಷೇಧ!

Spread the love

ಬೆಂಗಳೂರು: ಜೈಲುಗಳಲ್ಲಿ ನಡೆಯುವ ಎಲ್ಲ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾರಾಗೃಹ ಮತ್ತು ಸುಧಾರಣ ಸೇವೆಗಳ ಇಲಾಖೆ ಮುಂದಾಗಿದೆ.

ಬೆಂಗಳೂರಿನ ಕೇಂದ್ರ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಪ್ರಾಯೋಗಿಕವಾಗಿ ಈ ಪ್ರಕ್ರಿಯೆ ಆರಂಭವಾಗಿದ್ದು, ಜೈಲಿನ ಮುಖ್ಯ ಅಧೀಕ್ಷಕರು, ಅಧೀಕ್ಷಕರಿಗೆ ಮಾತ್ರ ಮೊಬೈಲ್‌ ಬಳಕೆಗೆ ಅವಕಾಶವಿರಲಿದೆ. ಕಾರಾಗೃಹದ ಮುಂಭಾಗದಲ್ಲೇ “ಮೊಬೈಲ್‌, ಲ್ಯಾಪ್‌ಟಾಪ್‌ ಮತ್ತು ಇತರ ಎಲೆಕ್ಟ್ರಾನಿಕ್‌ ವಸ್ತುಗಳ ಸಹಿತ ನಿಷೇಧಿತ ವಸ್ತುಗಳನ್ನು ಜೈಲಿನ ಒಳಗೆ ಕೊಂಡೊಯ್ಯುವಂತಿಲ್ಲ’ ಎಂಬ ಸೂಚನೆ ಫ‌ಲಕ ಹಾಕಲಾಗಿದೆ. ಇದೇ ಮಾದರಿಯ ಕ್ರಮಗಳನ್ನು ದಾವಣಗೆರೆ, ಮೈಸೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಸಹಿತ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿಯೂ ಅಳವಡಿಸಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುಲೆಟ್‌ಪ್ರೂಫ್ ಗಾಜು
ವಿಚಾರಣಾಧೀನ ಅಥವಾ ಸಜಾ ಕೈದಿಗಳ ಭೇಟಿಗೆ ಬರುವವರು ಕೈದಿಗಳನ್ನು ದೈಹಿಕವಾಗಿ ಮುಟ್ಟಿ ಮಾತಾಡಲು ಅವಕಾಶ ನಿರಾಕರಿಸಲಾಗಿದೆ. ಅದಕ್ಕಾಗಿ ಈ ವಿಭಾಗದಲ್ಲಿ ಬುಲೆಟ್‌ಪ್ರೂಫ್ ಗಾಜು ಅಳವಡಿಸಲಾಗಿದ್ದು, ದೂರವಾಣಿ ಸಂಪರ್ಕ ನೀಡಲಾಗಿದೆ. ಈ ಅಂತರದಲ್ಲಿಯೇ ಕೈದಿಗಳ ಸಂಬಂಧಿಗಳು ಮಾತನಾಡಬೇಕಾಗಿದೆ. ಒಮ್ಮೆಲೆ 10 ಕೈದಿಗಳಿಗೆ ಸಾಧ್ಯವಾಗುವಂತೆ ಇದನ್ನು ಸಿದ್ಧಪಡಿಸಲಾಗಿದೆ ಎಂದು ಜೈಲಿನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ