ಬೆಳಗಾವಿ – ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡುವ ಸಂಬಂಧ ತಜ್ಞರ ಜೊತೆ ಚರ್ಚಿಸಿ ತೀರ್ಮಾನಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಮೆರವಣಿಗೆಗಳಿಗೆ ಅನುಮತಿ ನೀಡಲಾಗುತ್ತಿಲ್ಲ. ಆದರೆ ಬೆಳಗಾವಿ ಕನ್ನಡ ರಾಜ್ಯೋತ್ಸವದಲ್ಲಿ ಮೆರವಣಿಗೆಗೆ ಅನುಮತಿ ನೀಡಬೇಕೆನ್ನುವ ಬೇಡಿಕೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ತಜ್ಞರ ಜೊತೆ ಚರ್ಚಿಸುತ್ತೇನೆ ಎಂದರು.
ಸಿಂದಗಿ ಚುನಾವಣೆ ಪ್ರಚಾರ ಮುಗಿಸಿ ಈಗ ಬೆಂಗಳೂರಿಗೆ ತೆರಳಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಹಾನಗಲ್ ಪ್ರಚಾರಕ್ಕೆ ತೆರಳುತ್ತೇನೆ. ಎರಡೂ ಕಡೆ ಉಪಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದೂ ಬೊಮ್ಮಾಯಿ ಹೇಳಿದರು.
Laxmi News 24×7