Breaking News

ಅನ್ಯ ಭಾಷೆ ಬಳಸದೆ ನಾಲ್ಕು ನಿಮಿಷ ಕನ್ನಡದಲ್ಲಿ ಮಾತಾಡಿದ್ರೆ ಸಿಗುತ್ತೆ ನಗದು ಬಹುಮಾನ.!

Spread the love

ಬೆಂಗಳೂರು: ಒಂದೂ ಅನ್ಯ ಭಾಷೆಯ ಪದಗಳನ್ನು ಬಳಸದೇ ನಿರರ್ಗಳವಾಗಿ ಕನ್ನಡದಲ್ಲಿ ನಾಲ್ಕು ನಿಮಿಷಗಳ ಕಾಲ ಕನ್ನಡ ನಾಡು, ನುಡಿ, ಪರಂಪರೆಗೆ ಸಂಬಂಧಿಸಿದ ವಿಷಯಗಳ ಕುರಿತು ವಿಡಿಯೋ ಸೆಲ್ಸಿ ತಗೆದು ಕಳುಹಿಸಿದರೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ರಾಜ್ಯದಾದ್ಯಂತ 66ನೇ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದೆ. ಎಂದಿನಂತೆ ನವೆಂಬರ್ ಒಂದರಂದು ಮಾತ್ರ ರಾಜ್ಯೋತ್ಸವ ಆಚರಿಸದೇ, ಈ ಬಾರಿ ಅಕ್ಟೋಬರ್ 24ರಿಂದ ಅಕ್ಟೋಬರ್ 30ರವರೆಗೆ ‘ಕನ್ನಡಕ್ಕಾಗಿ ನಾವು’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಬಹುಮಾನದ ವಿವಿರ : ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಮೂವರಿಗೆ ಪ್ರಥಮ- 5000/-ರೂ., ದ್ವಿತೀಯ- 3000-ರೂ., ತೃತೀಯ 2000/- ರೂ ಬಹುಮಾನ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ವಿಜೇತರಾದವರನ್ನು ರಾಜ್ಯಮಟ್ಟದಲ್ಲಿ ಮತ್ತೆ ಸ್ಪರ್ಧೆ ನಡೆಸಲಾಗುವುದು. ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ, 50,000/- ರೂ. ದ್ವಿತೀಯ ಬಹುಮಾನ- 30,000/- ಮತ್ತು ತೃತೀಯ ಬಹುಮಾನ- 20,000/ರೂ. ನೀಡಲಾಗುವುದು. ಅಕ್ಟೋಬರ್ 28ರೊಳಗೆ ವಿಡಿಯೋ-ಸೆಲ್ಸಿ ತಗೆದು ಕಳುಹಿಸುವುದು. ಅಕ್ಟೋಬರ್ 20ರಂದು ರಾಜ್ಯಮಟ್ಟದ ಸ್ಪರ್ಧೆ ನಡೆಯಲಿದೆ. ನೀವೂ ಪ್ರಯತ್ನಿಸಿ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ