ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಗೌಡಗೇರಾ ಗ್ರಾಮದಲ್ಲಿ ವಾಲ್ಮೀಕಿ ಜಯಂತಿ ಪ್ರಯುಕ್ತ ತಲ್ವಾರ್, ಮಚ್ಚು ಕೈಯಲ್ಲಿ ಹಿಡಿದು ಯುವಕರು ಕುಣಿದು ಕುಪ್ಪಳಿಸಿದ್ದಾರೆ.
ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಡಿಜೆ ಮೆರವಣಿಗೆ ಆಯೋಜನೆ ಮಾಡಿರುವುದಲ್ಲದೆ ಶಸ್ತ್ರಾಸ್ತ್ರ ಬಳಕೆ ಪ್ರದರ್ಶನ ನಿಷೇಧ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆ. ಮೆರವಣಿಗೆಯುದ್ದಕ್ಕೂ ತಲ್ವಾರ್ ಹಿಡಿದು ಯುವಕರು ಸ್ಟೆಪ್ ಹಾಕಿದ್ದಾರೆ. ಪೊಲೀಸ್ ಇಲಾಖೆಯ ಆದೇಶಕ್ಕಿಲ್ಲ ಕವಡೆಕಾಸಿನ ಕಿಮ್ನತ್ತು ಇಲ್ಲ ಎನ್ನುವಂತಹ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ.
ಕೆಂಬಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಲ್ಲಾ ಗೊತ್ತಿದ್ದರೂ ಕುಳಿತ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ.