ಬೆಂಗಳೂರು,ಆ.17- ರಾಜ್ಯಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ರಾಜಧಾನಿ ಬೆಂಗಳೂರಿನ ಡಿಜೆ ಹಳ್ಳಿ, ಕೆಜಿಹಳ್ಳಿ ಗಲಭೆ ಪ್ರಕರಣದ ಘಟನಾ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದ ನಿಯೋಗ ಇಂದು ಸಂಜೆ ಭೇಟಿ ನೀಡಲಿದೆ.
ಬಿಜೆಪಿ ಮುಖಂಡರ ನಿಯೋಗದ ಜೊತೆಗೆ ನಳಿನ್ ಕುಮಾರ್ ಕಟೀಲ್ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದು, ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ನಿವಾಸಕ್ಕೂ ಭೇಟಿ ನೀಡುವರು.
ಇದಕ್ಕೂ ಮುನ್ನ ಗೃಹ ಸಚಿವರ ನಿವಾಸಕ್ಕೆ ತೆರಳಿರುವ ಕಟೀಲ್, ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇದಾದ ಬಳಿಕ ಡಿಜೆ ಹಳ್ಳಿಗೆ ತೆರಳಲಿದ್ದಾರೆ.
ಪ್ರವಾದಿ ಮುಹಮ್ಮದ್ ಪೈಗಂಬರ್ ಕುರಿತಾಗಿ ಅವಹೇಳನಕಾರಿಯಾಗಿ ಫೇಸ್‍ಬುಕ್‍ನಲ್ಲಿ ಸ್ಟೇಟಸ್ ಹಾಕಲಾಗಿದೆ ಎಂದು ಆರೋಪಿಸಿ ಮಂಗಳವಾರ ರಾತ್ರಿ ಕಿಡಿಗೇಡಿಗಳ ಗುಂಪು ಡಿಜೆ ಹಳ್ಳಿಯಲ್ಲಿ ದಾಂಧಲೆ ನಡೆಸಿತ್ತು.
ಡಿಜೆಹಳ್ಳಿ ಪೊಲೀಸ್ ಠಾಣೆ, ಕೆಜಿಹಳ್ಳಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿತ್ತು. ಅಲ್ಲದೆ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ನಿವಾಸದ ಮೇಲೂ ದಾಳಿ ನಡೆಸಿ ಬೆಂಕಿ ಹಚ್ಚಲಾಗಿತ್ತು.
ಈ ಗಲಭೆಯಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ನೂರಕ್ಕೂ ಅಕ ವಾಹನಗಳು ಸುಟ್ಟುಹೋಗಿತ್ತು. ಗಲಭೆ ಸಂಬಂಧ 300ಕ್ಕೂ ಅಕ ಮಂದಿಯನ್ನು ಈಗಾಗಲೇ ಬಂಸಲಾಗಿದೆ.
ಗಲಭೆ ನಡೆದ ಸಂದರ್ಭದಲ್ಲಿ ಗುಂಪನ್ನು ನಿಯಂತ್ರಣ ಮಾಡಲು ನಡೆದ ಫೈರಿಂಗ್‍ನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಬಳಿಕ ಮತ್ತೋರ್ವ ಯುವಕ ಮೃತಪಟ್ಟಿದ್ದಾರೆ.