Breaking News

ಕಾಂಗ್ರೆಸ್ ನವರಿಗೆ ಟೀಕೆ ಮಾಡಿಲ್ಲ ಅಂದ್ರೆ ತಿಂದಿದ್ದು ಜೀರ್ಣ ಆಗಲ್ಲ; ಸಿದ್ದರಾಮಯ್ಯ ಹೇಳಿಕೆಗೆ ನಯಾಪೈಸೆ ಬೆಲೆ ಇಲ್ಲ; ತಿರುಗೇಟು ನೀಡಿದ ಆರ್. ಅಶೋಕ್

Spread the love

ಬೆಂಗಳೂರು: ಶತಕೋಟಿ ಲಸಿಕಾ ಸಂಭ್ರಮಕ್ಕೆ ಟ್ವೀಟ್ ಮೂಲಕ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಕಂದಾಯ ಸಚಿವ ಆರ್. ಅಶೋಕ್, ವಿಶ್ವ ಆರೋಗ್ಯ ಸಂಸ್ಥೆಯೇ ಅಭಿನಂದನೆ ಸಲ್ಲಿಸಿದ ಮೇಲೆ ಬೇರೆಯವರ ಕಮೆಂಟ್ ಗೆ ನಯಾಪೈಸೆ ಬೆಲೆಯಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ವಿಶ್ವ ಆರೋಗ್ಯ ಸಂಸ್ಥೆಯೇ ದೇಶದ ಪ್ರಧಾನಿ ಮೋದಿ ಹಾಗೂ ಲಸಿಕೆ ನೀಡಿದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದೆ. ಹೀಗಿರುವಾಗ ಸಣ್ಣಪುಟ್ಟ ಜನ ಈ ಬಗ್ಗೆ ಮಾತನಾಡಿದರೆ ತಲೆ ಕೆಡಿಸಿಕೊಳ್ಳಬೇಕಿಲ್ಲ ಎಂದಿದ್ದಾರೆ.

ಸಿದ್ದರಾಮಯ್ಯ ಹೀಗೆ ಮಾತಾಡುತ್ತಾ ಇರಲಿ, ಅದಕ್ಕೂ ಕಳೆ ಬರುತ್ತೆ. ಪ್ರಧಾನಿ ಮೋದಿಯವರನ್ನು ಟೀಕಿಸದೇ ಹೋದರೆ ಕಾಂಗ್ರೆಸ್ ನವರಿಗೆ ತಿಂದಿದ್ದು ಜೀರ್ಣ ಆಗಲ್ಲ. ಕುಡಿಯುವ ನೀರು ಅರಗಲ್ಲ. ಯಾವುದನ್ನು ಟೀಕಿಸಬೇಕು ಎಂಬ ಪರಿಜ್ಞಾನ ಕೂಡ ಸಿದ್ದರಾಮಯ್ಯನವರಿಗೆ ಇಲ್ಲ. ಒಳ್ಳೆ ಕೆಲಸ ಮಾಡಿದರೆ ಒಳ್ಳೆಯದನ್ನು ಹೇಳಬೇಕು ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ