Home / ಜಿಲ್ಲೆ / ಬೆಳಗಾವಿ / ಗೋಕಾಕ / 90ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಲಾದ 15ಪ್ರೌಢ ಶಾಲಾ ಕೋಠಡಿಗಳನ್ನು ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ರಮೇಶ ಜಾರಕಿಹೊಳಿ

90ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಲಾದ 15ಪ್ರೌಢ ಶಾಲಾ ಕೋಠಡಿಗಳನ್ನು ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ರಮೇಶ ಜಾರಕಿಹೊಳಿ

Spread the love

ಗೋಕಾಕ: ಕೊರೋನಾ ಆಘಾತದಿಂದ ಸಹಜ ಸ್ಥಿತಿಯತ್ತ ಶಾಲೆಗಳು ಪ್ರಾರಂಭವಾಗುತ್ತಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ಹಾಗೂ ಕಠೀಣ ಪರಿಶ್ರಮದಿಂದ ಶೈಕ್ಷಣಿಕವಾಗಿ ಪ್ರಗತಿಸಾಧಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಅವರು, ಶುಕ್ರವಾರದಂದು ನಗರದ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ರಾಷ್ಟ್ರೀಯ ಮಾಧ್ಯಮಿಕ ಸರ್ವಶಿಕ್ಷಣ ಅಭಿಯಾನದಲ್ಲಿ 90ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಲಾದ 15ಪ್ರೌಢ ಶಾಲಾ ಕೋಠಡಿಗಳನ್ನು ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಶಾಲೆಗಳಲ್ಲಿ ಕೊರೋನಾ ವೈರಸ್ ನಿಯಂತ್ರಣ ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ, ಶಿಕ್ಷಕರ ಮಾರ್ಗದರ್ಶನದಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಬೇಕು. ಕಳೆದ 2ವರ್ಷಗಳಿಂದ ಶೈಕ್ಷಣಿಕವಾಗಿ ವಿದ್ಯಾರ್ಥಿಗಳಿಗೆ ಹಿನ್ನಡೆಯಾಗಿದ್ದು, ಶಿಕ್ಷಕರು ಹಾಗೂ ಪಾಲಕರು ಅವರನ್ನು ಪ್ರೋತ್ಸಾಹಿಸಿ ಅವರ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡಬೇಕು ಎಂದರು.

ಇಂದಿನ ಸ್ಫಧಾತ್ಮಕ ಯುಗದಲ್ಲಿ ಶಿಕ್ಷಣ ಮಹತ್ತರ ಪಾತ್ರ ವಹಿಸುತ್ತಿದೆ. ಸರಕಾರ ಶೈಕ್ಷಣಿಕ ಪ್ರಗತಿಗೆ ವಿಶೇಷ ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಇವುಗಳ ಸದುಪಯೋಗದಿಂದ ವಿದ್ಯಾರ್ಥಿಗಳು ಪ್ರತಿಭಾನ್ವಿತರಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಉಪಾಧ್ಯಕ್ಷ ಬಸವರಾಜ ಆರೇನ್ನವರ, ಜಿಪಂ ಮಾಜಿ ಸದಸ್ಯರಾದ ಟಿ ಆರ್ ಕಾಗಲ, ಎಮ್ ಎಲ್ ತೋಳಿನವರ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ, ಪ್ರಾಚಾರ್ಯರ ಅರ್ಜುನ ಹಾದಿಮನಿ, ಉಪಪ್ರಾಚಾರ್ಯ ಜಿ ಆರ್ ಮಾಳಗಿ ಸೇರಿದಂತೆ ನಗರಸಭೆ ಸದಸ್ಯರು, ಬಿಜೆಪಿ ಕಾರ್ಯಕರ್ತರು ಹಾಗೂ ಶಿಕ್ಷಕ ಸಿಬ್ಬಂಧಿಗಳು ಉಪಸ್ಥಿತರಿದ್ದರು.

ಪೋಟೊ 22 ಜಿಕೆಕೆ-1
ಗೋಕಾಕ: ನಗರದ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ರಾಷ್ಟ್ರೀಯ ಮಾಧ್ಯಮಿಕ ಸರ್ವಶಿಕ್ಷಣ ಅಭಿಯಾನದಲ್ಲಿ 90ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಲಾದ 15ಪ್ರೌಢ ಶಾಲಾ ಕೋಠಡಿಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸುತ್ತಿರುವದು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ