Breaking News

ಕೊಲ್ಲಾಪುರ ಮಹಾಲಕ್ಷ್ಮಿ ದರ್ಶನ ಮಾಡಿದ ರಮೇಶ್​ ಜಾರಕಿಹೊಳಿ,

Spread the love

ಬೆಳಗಾವಿ: ಕಳೆದುಕೊಂಡ ಮಂತ್ರಿಗಿರಿಯನ್ನು ಮತ್ತೆ ಪಡೆಯಲು ಹರಸಾಹಸ ಪಡುತ್ತಿರುವ ಗೋಕಾಕ ಶಾಸಕ ಹಾಗೂ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಟೆಂಪಲ್​ ರನ್​ ಮುಂದುವರಿಸಿದ್ದಾರೆ.

ಕಳೆದ ವಾರ ಪುತ್ರ ಅಮರನಾಥ ಸೇರಿದಂತೆ ಆಪ್ತರೊಂದಿಗೆ ಕೇದಾರನಾಥನ ದರ್ಶನ ಮಾಡಿದ್ದ ಜಾರಕಿಹೊಳಿ, ಇದೀಗ ಮಹಾರಾಷ್ಟ್ರದ ಕೊಲ್ಲಾಪುರ ಮಹಾಲಕ್ಷ್ಮಿ ದರ್ಶನ ಪಡೆದಿದ್ದಾರೆ. ನಿನ್ನೆ ಶುಕ್ರವಾರ ಹಿನ್ನೆಲೆಯಲ್ಲಿ ಕೊಲ್ಲಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಅಂದಹಾಗೆ ಕೊಲ್ಲಾಪುರ ಮಹಾಲಕ್ಷ್ಮಿ, ರಮೇಶ್ ಜಾರಕಿಹೊಳಿ ಅವರ ಮನೆದೇವರು. ಭೇಟಿ ವೇಳೆ ಮಾಜಿ ಶಾಸಕ ಸಂಜಯ ಪಾಟೀಲ್ ಸಾಥ್​ ನೀಡಿದರು. ಸಂಪುಟ ಸೇರ್ಪಡೆಗೆ ರಮೇಶ್​ ಜಾರಕಿಹೊಳಿ ತೆರೆ ಮರೆಯಲ್ಲಿ ತುಂಬಾ ಕಸರತ್ತು ನಡೆಸುತ್ತಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹೆಸರು ಕೇಳಿಬಂದ ಬಳಿಕ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ