Breaking News

ಮಟ್ಕಾ ದಂಧೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದ ಪೊಲೀಸ್​ ಮೇಲೇ ಹಲ್ಲೆ

Spread the love

ಬೀದರ್: ಮಟ್ಕಾ ದಂಧೆ ಕುರಿತು ಮಾಹಿತಿ ಕಲೆ ಹಾಕುತ್ತಿದ್ದ ಪೊಲೀಸ್ ಪೇದೆಯೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಬೀದರ್​ ಜಿಲ್ಲೆಯ ಔರಾದ್ ಪೊಲೀಸ್ ಠಾಣೆಯ ಹೆಡ್​​ಕಾನ್ಸ್​ಟೆಬಲ್ ಸಂಗಮೇಶ್ ನಿಟ್ಟೂರೆ ಮೇಲೆ ಹಲ್ಲೆ ನಡೆದಿದೆ.

ಔರಾದ್ ತಾಲೂಕಿನ ಹಲವೆಡೆ ಮಟಕಾ ದಂಧೆ ನಡೆಯುತ್ತಿದ್ದು, ಈ ಅಕ್ರಮದ ಬಗ್ಗೆ ಮಾಹಿತಿ ನೀಡುತ್ತಿದ್ದ ಸಂಗಮೇಶ್​ರನ್ನು ಶಿವಶಂಕರ್​ ಮಳಗೆಮನೆ ಎಂಬಾತ ಕರೆಸಿಕೊಂಡು, ಇತರ ನಾಲ್ವರೊಂದಿಗೆ ಹಲ್ಲೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮಟಕಾ ಬುಕ್ಕಿಗಳಾದ ಶಿವಶಂಕರನನ್ನು ದಸ್ತಗಿರಿ ಮಾಡಲಾಗಿದೆ. ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಬಜರಂಗ ಮತ್ತು ಇತರ ಇಬ್ಬರು ಆರೋಪಿಗಳ ಪತ್ತೆ ಕಾರ್ಯ ನಡೆದಿದೆ ಎಂದು ಬೀದರ್ ಎಸ್ಪಿ ಡಿ.ಎಲ್​.ನಾಗೇಶ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಮತದಾರರ ಪಟ್ಟಿ ಪರಿಷ್ಕರಣೆಗೆ ಎಲ್ಲರೂ ಸಹಕರಿಸಿ: ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಿ: ಡಾ. ವೀರಣ್ಣ ಚರಂತಿಮಠ

Spread the loveಬಾಗಲಕೋಟೆ: ಪ್ರತಿಯೊಬ್ಬರೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಬೇಕು” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ