Breaking News

ಬಾಯಲ್ಲಿತ್ತು 100 ಗ್ರಾಂ ಚಿನ್ನದ ಬಿಸ್ಕೆಟ್​​.. ಕಸ್ಟಮ್ಸ್ ಅಧಿಕಾರಿಗಳ ಬಳಿ ಸಿಕ್ಕಿಬಿದ್ದಿದ್ದು ಹೇಗೆ?

Spread the love

ಬೆಂಗಳೂರು: ಕೆಂಪೇಗೌಡ ‌ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಅಧಿಕಾರಿಗಳು ಅಕ್ರಮವಾಗಿ ಸಾಗಾಣೆ ಮಾಡುತ್ತಿದ್ದ 4.5 ಲಕ್ಷ ಮೌಲ್ಯದ 100 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಚೆನ್ನೈ ಮೂಲಕ ಪ್ರಯಾಣಿಕನೊಬ್ಬ ಬಾಯಿಯೊಳಗೆ ಚಿನ್ನದ ಬಿಸ್ಕೆಟ್​ಗಳನ್ನು ಇಟ್ಟುಕೊಂಡು ಅಕ್ರಮವಾಗಿ ಸಾಗಾಣಿಕೆ ಮಾಡ್ತಿದ್ದ. ವಿಚಾರಣೆ ನಡೆಸುವ ವೇಳೆ ಮಾತನಾಡಲು ಪ್ರಯಾಣಿಕ ಕಷ್ಟಪಡುತ್ತಿದ್ದ. ಇದರಿಂದ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಆತನ ತಪಾಸಣೆ ನಡೆಸಿದ್ದು, 15 ಚಿನ್ನದ ಬಿಸ್ಕೆಟ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಇಂಡಿಗೋ ವಿಮಾನದಲ್ಲಿ ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಾಣಿಕೆ ಮಾಡಲಾಗ್ತಿತ್ತು.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ