Breaking News

ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ; ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮಕ್ಕೆ ಗೈರು

Spread the love

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಇಂದು (ಅಕ್ಟೋಬರ್ 23) ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯೋತ್ಸವ ಆಚರಣೆ ಮಾಡಲಾಗಿದೆ. ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜನೆ ಮಾಡಲಾದ ಈ ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನಿಲ್ ಕುಮಾರ್ ಮತ್ತು ಅಧ್ಯಕ್ಷತೆ ವಹಿಸಬೇಕಿದ್ದ ಶಾಸಕ ಉದಯ ಗರುಡಾಚಾರ್ ಗೈರಾಗಿದ್ದಾರೆ.

ಹಾನಗಲ್ ಉಪಚುನಾವಣಾ ಪ್ರಚಾರದಲ್ಲಿರುವ ಕಾರಣ ಜಯಂತ್ಯೋತ್ಸವ ಉದ್ಘಾಟಿಸಬೇಕಿದ್ದ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಕಾರ್ಯ‌ಕ್ರಮಕ್ಕೆ ಆಗಮಿಸಲು ಸಾಧ್ಯವಾಗಿಲ್ಲ. ಕಾರ್ಯಕ್ರಮದಲ್ಲಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ ಮಾತ್ರ ಹಾಜರಾಗಿದ್ದರು. ಮೃತ್ಯುಂಜಯ ಸ್ವಾಮೀಜಿ ಚನ್ನಮ್ಮ ಜಯಂತಿ ಉದ್ಘಾಟಿಸಿದರು ಈ ವೇಳೆ ವೇಳೆ ಲಿಂಗಾಯತ ಪಂಚಮಸಾಲಿ ವೇದಿಕೆಯ ಪದಾಧಿಕಾರಿಗಳನ್ನು ವೇದಿಕೆಗೆ ಆಹ್ವಾನಿಸಿದ್ದಾರೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ