ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ಅವಾಂತರ ನಡೆದಿದ್ದು, ಮೆಟ್ರೋ ಫೇಸ್ -2 ಕಾಮಗಾರಿ ವೇಳೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಬಹು ದೊಡ್ಡ ಕ್ರೇನ್ ನಲವತ್ತು ಅಡಿ ಎತ್ತರದಿಂದ ಕೆಳಗೆ ಬಿದ್ದ ಘಟನೆ ಸಿಲ್ಕ್ ಬೋರ್ಡ್ ಬಳಿ ನಡೆದಿದೆ.
ಸಿಲ್ಕ್ ಬೋರ್ಡ್ ಟು ಕೆ ಆರ್ ಪುರಂ ಮಾರ್ಗವಾಗಿ ನಡೆಯುತ್ತಿರುವ ಕಾಮಗಾರಿ ಸ್ಥಳದಲ್ಲಿ ಮೆಟ್ರೋ ಸೆಗ್ಮೆಂಟ್ಸ್ ಜೋಡಿಸುವ ಕಾರ್ಯ ನಡೆಯುತ್ತಿದ್ದು, ಈ ವೇಳೆ ಮೆಷಿನ್ ಅರ್ಧಕ್ಕೆ ಕಟ್ ಆದ ಪರಿಣಾಮ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇಂದು ಬೆಳಗ್ಗೆ 6:30ರ ವೇಳೆಗೆ ಘಟನೆ ನಡೆದಿದ್ದು, ನೂರಾರು ಮೆಟ್ರೋ ಕಾರ್ಮಿಕರು ಭಾರೀ ಅನಾಹುದಿಂದ ಅದೃಷ್ಟವಶಾತ್ ಪಾರಾಗಿದ್ದಾರೆ.
ಸದ್ಯ ಕೆಳಕ್ಕೆ ಬಿದ್ದಿರುವ ಲಾಂಚಿಂಗ್ ಗಾರ್ಡ್ ಎಂಬ ಬೃಹತ್ ಮೆಷಿನ್ ಮೇಲೆತ್ತಲು ಕಾರ್ಮಿಕರು ಹರಸಾಹಸ ಪಡುತ್ತಿದ್ದು, ಅಪಘಡ ಸಂಭವಿಸಿದರು ಸ್ಥಳಕ್ಕೆ ಮೆಟ್ರೋದ ಉನ್ನತ ಅಧಿಕಾರಿಗಳು ಆಗಮಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಘಟನೆ ನಡೆದು ಆರು ಗಂಟೆ ಕಳೆದ್ರು ಬಿಎಂಆರ್ಸಿಎಲ್ನ ಅಧಿಕಾರಿಗಳು ಬಂದಿಲ್ಲ ಎನ್ನಲಾಗಿದೆ.