Breaking News
Home / ರಾಜಕೀಯ / ಹೃದಯ ವಿದ್ರಾವಕ ಘಟನೆ: ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಹೃದಯ ವಿದ್ರಾವಕ ಘಟನೆ: ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

Spread the love

ಕಲಬುರಗಿ: ಮೂರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಳಂದ ತಾಲ್ಲೂಕಿನ ಮಾಡ್ಯಾಳ ಗ್ರಾಮದಲ್ಲಿ ನಡೆದಿದೆ.

ಈ ಆತ್ಮಹತ್ಯೆ ಕೇಸ್​ನಲ್ಲಿ ತಾಯಿ, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಓರ್ವ ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಬಚಾವ್ ಆಗಿದೆ. ತಾಯಿ ಲಕ್ಷ್ಮಿ ಏಳಕೆ (28),‌ ಮಕ್ಕಳಾದ ಗೌರಮ್ಮ (6), ಸಾವಿತ್ರಿ (1) ಮೃತ ದುರ್ದೈವಿಗಳು.

ಇನ್ನೋರ್ವ ಬಾಲಕಿಯನ್ನ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೂರು ಜನ ಹೆಣ್ಣು ಮಕ್ಕಳಿರುವ ಕಾರಣಕ್ಕೆ ಗಂಡ, ಗಂಡನ ಮನೆಯವರ ಕಿರುಕುಳ ನೀಡುತ್ತಿದ್ದರು ಅನ್ನೋ ಆರೋಪ ಕೇಳಿಬಂದಿದೆ. ಕಿರುಕುಳಕ್ಕೆ ಬೆಸತ್ತು ಗ್ರಾಮದ ಹೊರವಲಯದ ಜಮೀನು ಒಂದರ ಬಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ನಿಂಬರ್ಗಾ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ