Breaking News

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

Spread the love

ವಿಜಯಪುರ: ಜಾತಿ ಮೀಸಲು ಕಲ್ಪಿಸುವ ಕುರಿತು ಹಲವು ಸಮುದಾಯಗಳಿಂದ ಬೇಡಿಕೆಗಳು ಬಂದಿವೆ. ಈ ಬಗ್ಗೆ ವರದಿ ತರಿಸಿಕೊಂಡು ನನ್ನದೇ ಅವಧಿಯಲ್ಲಿ ಕಾನೂನು ಚೌಕಟ್ಟಿನಲ್ಲಿ ಮೀಸಲು ಸೌಲಭ್ಯ ಕಲ್ಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಭಾನುವಾರ ಸಿಂದಗಿ ವಿಧಾನಸಭೆ ಉಪ ಚುನಾವಣೆ ಪ್ರಚಾರಾರ್ಥ ಹಂದಿಗನೂರು ಗ್ರಾಮದಲ್ಲಿ ರೋಡ್ ಶೋನಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ರಮೇಶ ಭೂಸನೂರ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಬಾರಿಯೂ ರಾಜ್ಯದಲ್ಲಿ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬರುವ ಸಂಪುಟ ಸಭೆಯಲ್ಲಿ ಮುಂಬೈ ಕರ್ನಾಟಕ ಪ್ರಾಂತ್ಯಕ್ಕೆ ಕಿತ್ತೂರ ಕರ್ನಾಟಕ ನಿರ್ಧಾರ ಕೈಗೊಳ್ಳುವುದಾಗಿ ಪ್ರಕಟಿಸಿದರು.

ಕಿತ್ತೂರ ರಾಣಿ ಚನ್ನಮ್ಮ ಅರಮನೆ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿ, ಯೋಜನೆ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ